
ಒಡಿಶಾದ ಭುವನೇಶ್ವರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಯೂತ್ ವಾಲಿಬಾಲ್ ಚಾಂಪಿಯನ್ ಶಿಪ್ ಪಂದ್ಯಾಟವು ಮಾರ್ಚ್ ತಿಂಗಳಿನಲ್ಲಿ ನಡೆಯಲಿದ್ದು, 26 ರ ವಿಭಾಗದ ಯೂತ್ ನ್ಯಾಷನಲ್ ಕರ್ನಾಟಕ ರಾಜ್ಯ ತಂಡದಲ್ಲಿ ಪಂಜದ ಚಿನ್ಮಯ ಎಸ್ ಆಳ್ವ ನಾಯಕನಾಗಿ ಆಯ್ಕೆಯಾಗಿರುತ್ತಾರೆ. ಈತ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಆಳ್ವ ಮತ್ತು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಶಶಿಕಲಾ ಎಸ್ ಆಳ್ವ ದಂಪತಿಗಳ ಪುತ್ರ. ಚಿನ್ನಯ್ ರವರು ಪ್ರಸ್ತುತ ಎಸ್.ಆರ್.ಎಂ ಯೂನಿವರ್ಸಿಟಿಯಲ್ಲಿ ಪ್ರಥಮ ಬಿ.ಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಚಿತ್ರ, ವರದಿ : ಉಮಾಪ್ರಸಾದ್ ರೈ ನಡುಬೈಲು


























































































































