
ಪುತ್ತೂರು ತಾಲೂಕು ಬಂಟರ ಸಂಘದ ನೂತನ ನಿರ್ದೇಶಕರಾಗಿ ದಯಾನಂದ ರೈ ಕೋರ್ಮಂಡರವರು ಆಯ್ಕೆಯಾಗಿದ್ದಾರೆ. ಸಂಘದ ಹಾಲಿ ನಿರ್ದೇಶಕರಾಗಿದ್ದ ಉದ್ಯಮಿ ಸತೀಶ್ ರೈ ಕಟ್ಟಾವು ಅವರ ರಾಜೀನಾಮೆಯಿಂದ ತೆರವಾಗಿದ್ದ ನಿರ್ದೇಶಕ ಸ್ಥಾನಕ್ಕೆ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.



























































































































