
ಬಂಟರ ಸಂಘ ಮುಂಬಯಿ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ‘ಮಾತಾ ಕೀ ಚೌಕಿ’ ಭಕ್ತಿ ಪ್ರಧಾನ ಕಾರ್ಯಕ್ರಮವು ಮಾರ್ಚ್ 31 ರಂದು ಎಸ್.ಎಂ ಶೆಟ್ಟಿ ಪೊವಾಯಿ ಶಿಕ್ಷಣ ಸಂಕುಲದ ಸಭಾಂಗಣದಲ್ಲಿ ಸಂಜೆ 4 ಗಂಟೆಯಿಂದ ಅದ್ದೂರಿಯಾಗಿ ಆಚರಿಸಲ್ಪಟ್ಟಿತು. ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ, ಉಪಾಧ್ಯಕ್ಷರಾದ ಮಹೇಶ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್.ಕೆ ಶೆಟ್ಟಿ, ಪ್ರಾದೇಶಿಕ ಸಮಿತಿಗಳ ಸಂಚಾಲಕರಾದ ರವೀಂದ್ರನಾಥ ಭಂಡಾರಿ, ಎಸ್.ಎಮ್ ಶೆಟ್ಟಿ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಆರ್ ಶೆಟ್ಟಿ, ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಸೂರಜ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಅಮರನಾಥ್ ಶೆಟ್ಟಿ, ಸಮಿತಿಯ ಸಂಚಾಲಕರಾದ ರವೀಂದ್ರ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ವಜ್ರಾಕ್ಷಿ ಪೂಂಜಾ ಹಾಗೂ ಎಲ್ಲಾ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ದೀಪ ಬೆಳಗುವುದರ ಮೂಲಕ ಚಾಲನೆ ನೀಡಲಾಯಿತು.


ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಉಪಾಧ್ಯಕ್ಷರಾದ ಯಶವಂತ ಶೆಟ್ಟಿ, ರಮೇಶ್ ರೈ, ಕಾರ್ಯದರ್ಶಿ ತಾರಾನಾಥ ಶೆಟ್ಟಿ, ಕೋಶಾಧಿಕಾರಿ ಮೋಹನದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಅಮರನಾಥ ಶೆಟ್ಟಿ, ಜೊತೆ ಕೋಶಾಧಿಕಾರಿ ಅಭಿಷೇಕ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಅಮರನಾಥ್ ಶೆಟ್ಟಿ ಅವರ ನೇತೃತ್ವದಲ್ಲಿ ಸಲಹೆಗಾರರಾದ ವಜ್ರಾಕ್ಷಿ ಪೂಂಜಾ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಜಯಲಕ್ಷ್ಮೀ ಜೆ ಶೆಟ್ಟಿ, ಕಾರ್ಯದರ್ಶಿ ವೃಕ್ಷಾ ಭಂಡಾರಿ, ಕೋಶಾಧಿಕಾರಿ ಪ್ರಮೀಳಾ ಆರ್ ಶೆಟ್ಟಿ, ಜೊತೆ ಕಾರ್ಯದರ್ಶಿ ಪುಷ್ಪಲತಾ ಎಸ್ ಶೆಟ್ಟಿ, ಕೋಶಾಧಿಕಾರಿ ಮಮತಾ ಎಸ್ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷೆ ಅನುಸೂಯ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅದ್ವಿತ್ ಪೂಂಜಾ, ಪದಾಧಿಕಾರಿಗಳು ಹಾಗೂ ಸಮಿತಿಯ ಎಲ್ಲಾ ಸದಸ್ಯರ ಸಹಕಾರದಿಂದ ಯಶಸ್ವಿಯಾಗಿ ನೆರವೇರಿತು.
ನಂತರ ಮಾತಾ ಕೀ ಚೌಕಿ ಕಾರ್ಯಕ್ರಮವು ಭಕ್ತಿಭಾವ, ಶ್ರದ್ಧೆ ಮತ್ತು ಆತ್ಮೀಯತೆಯ ಸೊಗಸನ್ನು ಹೊತ್ತು ತಂದ ಒಂದು ಅದ್ಭುತ ಧಾರ್ಮಿಕ ಸಂಭ್ರಮವಾಗಿ ನೆರವೇರಿತು. ಭಕ್ತರು ಭಜನೆಗಳು ಮತ್ತು ಕೀರ್ತನೆಗಳ ಮೂಲಕ ಆಧ್ಯಾತ್ಮಿಕ ತಲ್ಲೀನತೆಯಲ್ಲಿ ಮುಳುಗಿದರು. ಕಾರ್ಯಕ್ರಮವು ಮಹಿಳಾ ವಿಭಾಗದ ಸದಸ್ಯರ ಭಜನೆಯೊಂದಿಗೆ ಆರಂಭಗೊಂಡಿತು. ನಂತರ ಮಾತೆಯ ಆರಾಧನೆ, ವಿಶೇಷ ಪೂಜೆಗಳು ನೆರವೇರಿದವು. ಭಕ್ತರು ‘ಜೈ ಮಾತಾ ದಿ’ ಎಂದು ಸ್ತುತಿಸುತ್ತಾ, ಭಕ್ತಿಯ ಶಕ್ತಿಯನ್ನು ಗುಣಗಾನ ಮಾಡುತ್ತಾ, ಭಕ್ತಿರಸ ತುಂಬಿ ತುಳುಕುವ ಭಾಸವಾಯಿತು. ಸಾಂಪ್ರದಾಯಿಕ ಭಜನೆಗಳು ಮತ್ತು ಆ ಜಗನ್ಮಾತೆಯ ಸುಂದರ ಅಲಂಕಾರಗಳು ಕಾರ್ಯಕ್ರಮದ ಮೆರುಗನ್ನು ಇನ್ನಷ್ಟು ಹೆಚ್ಚಿಸಿತು. ಈ ಸಂದರ್ಭದಲ್ಲಿ ಪಾಲ್ಗೊಂಡ ಎಲ್ಲಾ ಭಕ್ತರು ಮಾತೆಯ ಕೃಪೆಗೆ ಪಾತ್ರರಾಗಿದ್ದು, ಶಾಂತಿ ಮತ್ತು ಸಂತೋಷದ ಅನುಭವವನ್ನು ಪಡೆದರು. ಈ ಕಾರ್ಯಕ್ರಮವನ್ನು ಆಯೋಜಿಸಿದ ಎಲ್ಲಾ ಸದಸ್ಯರು ಮತ್ತು ಸಂಘಟಕರ ಶ್ರಮದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಇದೇ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಬಂಟರ ಸಂಘದ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರಾದ ಆಶಾ ಮನೋಹರ ಹೆಗ್ಡೆ, ಲತಾ ಪ್ರಭಾಕರ ಶೆಟ್ಟಿ, ಲತಾ ಜಯರಾಮ ಶೆಟ್ಟಿ, ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರಾದ ಸುಜಾತ ಗುಣಪಾಲ ಶೆಟ್ಟಿ, ವನಿತಾ ನೋಂಡ ಹಾಗೂ ವಿವಿಧ ಸಮಿತಿಯ ಕಾರ್ಯಾಧ್ಯಕ್ಷರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯರು ಹಾಗೂ ಸದಸ್ಯರನ್ನು ಗೌರವಿಸಲಾಯಿತು. ಕಾರ್ಯಕ್ರಮಕ್ಕೆ ಧನಸಹಾಯ ನೀಡಿದ ಗಣ್ಯರನ್ನು ಗೌರವಿಸಲಾಯಿತು.
ಚಿತ್ರ, ವರದಿ : ದಿನೇಶ್ ಕುಲಾಲ್

























































































































