
ಮುಂಬಯಿ ಮಹಾನಗರದ ಬಂಟರ ಪ್ರತಿಷ್ಠಿತ ಹಿರಿಯ ಸಮಾಜ ಸೇವಾ ಸಂಸ್ಥೆ ಬಂಟರ ಸಂಘ ಮುಂಬಯಿ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ಬಾರಿ ಏಪ್ರಿಲ್ 14 ರಂದು ಮಂಗಳವಾರ ಬೆಳಿಗ್ಗೆ 9:00 ರಿಂದ ಕುರ್ಲಾ ಪೂರ್ವ ಬಂಟರ ಭವನದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಗೃಹದಲ್ಲಿ ಬಿಸು ಪರ್ಬ ಆಚರಣೆ, ಬಂಟ ದಿನಾಚರಣೆ, ಶ್ರೀ ಮಹಾವಿಷ್ಣು ಬಂಟ ಯಕ್ಷ ಕಲಾ ವೇದಿಕೆಯ ವಾರ್ಷಿಕೋತ್ಸವ ಹಾಗೂ ಸಂಘದ ವಾರ್ಷಿಕ ಸ್ನೇಹ ಸಮ್ಮಿಲನ -2026 ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಲಿರುವುದು. ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಂಘದ ಸಾಹಿತ್ಯ ಮತ್ತು ಸಂಸ್ಕೃತಿಕ ಸಮಿತಿಯ ನೇತೃತ್ವದಲ್ಲಿ ಜರಗಲಿರುವ ಈ ಕಾರ್ಯಕ್ರಮವನ್ನು ಅಬುದಾಭಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಲಿರುವರು. ಮುಖ್ಯ ಅತಿಥಿಯಾಗಿ ಬೋಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿ, ಗೌರವ ಅತಿಥಿಯಾಗಿ ರೀಜೆನ್ಸಿ ಗ್ರೂಪ್ ಆಫ್ ಹೋಟೆಲ್ಸ್ ನ ಸಿಎಂಡಿ ಜಯರಾಮ ಎನ್ ಶೆಟ್ಟಿ ಆಗಮಿಸಲಿರುವರು. ಇದೇ ಸಂದರ್ಭದಲ್ಲಿ ಜರಗಲಿರುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಕಣಂಜಾರು ಆನಂದ ಶೆಟ್ಟಿ ಸ್ಮಾರಕ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಕಲಾವಿದ ಟಿ.ಆರ್ ಶೆಟ್ಟಿಯವರಿಗೆ ಕಣಂಜಾರು ಕುಟುಂಬಸ್ಥರ ಉಪಸ್ಥಿತಿಯಲ್ಲಿ ಹಾಗೂ ಶ್ರೀಮತಿ ಪ್ರೇಮಾ ನಾರಾಯಣ ರೈ ಪ್ರಶಸ್ತಿಯನ್ನು ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರ ಆರ್ ಶೆಟ್ಟಿ ಮತ್ತು ಪ್ರಶಸ್ತಿಯ ಪ್ರಾಯೋಜಕರಾದ ಶ್ರೀಮತಿ ಜ್ಯೋತಿ ಆರ್ ಎನ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕವಯತ್ರಿ ಶ್ರೀಮತಿ ಹರಿಣಿ ಶೆಟ್ಟಿ ಅವರಿಗೆ ಪ್ರಧಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಸಂಘದ 9 ಪ್ರಾದೇಶಿಕ ಸಮಿತಿಗಳ ಸದಸ್ಯರಿಂದ ನೃತ್ಯ ವೈಭವ ಮತ್ತು ಬಂಟರ ಸಂಘದ ಸದಸ್ಯರು ಹಾಗೂ ಶ್ರೀ ಮಹಾವಿಷ್ಣು ಕೃಪಾ ಬಂಟ ಯಕ್ಷ ಕಲಾ ವೇದಿಕೆಯ ಸದಸ್ಯರಿಂದ ‘ಶ್ರೀ ಶಬರಿಮಲೆ ಅಯ್ಯಪ್ಪ’ ಸಾದರಗೊಳ್ಳಲಿರುವುದು.


ಸಂಜೆ 5 ಗಂಟೆಗೆ ಸಂಘದ ವಾರ್ಷಿಕ ಸ್ನೇಹ ಸಮ್ಮಿಲನವು ನಡೆಯಲಿದ್ದು, ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅಧ್ಯಕ್ಷತೆ ವಹಿಸಲಿರುವರು. ಮಾಜಿ ಲೋಕಸಭಾ ಸದಸ್ಯ ಗೋಪಾಲ್ ಸಿ ಶೆಟ್ಟಿ ಅವರು ಜ್ಯೋತಿ ಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಲಿರುವರು. ಮುಖ್ಯ ಅತಿಥಿಯಾಗಿ ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಇದರ ಸಿಎಂಡಿ ಶಶಿಧರ್ ಶೆಟ್ಟಿ ಬರೋಡ, ಗೌರವ ಅತಿಥಿಯಾಗಿ ಉದ್ಯಮಿ ಮಹೇಶ್ ಶೆಟ್ಟಿ ತೆಳ್ಳಾರ್ ಭಾಗವಹಿಸಲಿರುವರು. ಇದೇ ಸಂದರ್ಭದಲ್ಲಿ ಸಂಘದ ಪ್ರತಿಷ್ಠಿತ ಜೀವಮಾನ ಸಾಧನಾ ಶ್ರೇಷ್ಠ ಪ್ರಶಸ್ತಿ -2026 ನ್ನು ಮುಂಬಯಿ ತುಳು ಕನ್ನಡಿಗರ ಹಿರಿಯಕ್ಕ, ಸಾಹಿತಿ, ಕವಯಿತ್ರಿ, ಶಿಕ್ಷಕಿ ಹಾಗೂ ಬಂಟರ ಸಂಘಕ್ಕಾಗಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಾಧಕಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಡಾ| ಸುನೀತಾ ಎಂ ಶೆಟ್ಟಿಯವರನ್ನು ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಲಾಗುವುದು. ರಮಾನಾಥ ಎಸ್ ಪಯ್ಯಡೆ ಸ್ಮಾರಕ ವರ್ಷದ ಶ್ರೇಷ್ಠ ಬಂಟ ಸಾದಕ -2026 ಪ್ರಶಸ್ತಿಯನ್ನು ಪ್ರಾಯೋಜಕ ಪಿ.ವಿ ಶೆಟ್ಟಿಯವರ ಉಪಸ್ಥಿತಿಯಲ್ಲಿ ಖ್ಯಾತ ಉದ್ಯಮಿ, ಸಮಾಜಸೇವಕ ಭವಾನಿ ಗ್ರೂಪ್ ಆಫ್ ಕಂಪನೀಸ್ ನ ಸಿಎಂಡಿ ಕೆ ಡಿ ಶೆಟ್ಟಿ ಅವರಿಗೆ ಪ್ರದಾನಿಸಲಾಗುವುದು.



ಮಧ್ಯಾಹ್ನ ಪ್ರೀತಿ ಭೋಜನ, ಸಂಜೆ ಉಪಹಾರ ಹಾಗೂ ರಾತ್ರಿ ಭೋಜನವಿದೆ. ಬಂಟ ಬಾಂಧವರು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸುವಂತೆ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ನವೀನ್ ಶೆಟ್ಟಿ ಇನ್ನ ಬಾಳಿಕೆ, ಸಂಘದ ಉಪಾಧ್ಯಕ್ಷ ಮಹೇಶ್ ಎಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್ ಕೆ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ರಮೇಶ್ ಬಿ ಶೆಟ್ಟಿ, ಜೊತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್, ಜೊತೆ ಕೋಶಾಧಿಕಾರಿ ಶಶಿಧರ್ ಕೆ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರ ಆರ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸವಿನ್ ಶೆಟ್ಟಿ, ಸಂಘದ ವಿಶ್ವಸ್ಥರು, ಮಾಜಿ ಅಧ್ಯಕ್ಷರುಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಪ್ರಾದೇಶಿಕ ಸಮಿತಿಗಳ ಸಮನ್ವಯಕರು, ಒಂಬತ್ತು ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರು, ಸಂಘದ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು ವಿನಂತಿಸಿದ್ದಾರೆ.

























































































































