



ಜನಸೇವಾ ಟ್ರಸ್ಟ್ ಗಿಳಿಯಾರು ಹಾಗೂ ಟೀಮ್ ಅಭಿಮತ ಇದರ ವತಿಯಿಂದ ಯೂನಿವರ್ಸಲ್ ಕೋಚಿಂಗ್ ಸೆಂಟರ್ ಬೆಂಗಳೂರು ಹಾಗೂ SMS College ಬ್ರಹ್ಮಾವರ ಇದರ ಸಹಯೋಗದಲ್ಲಿ IAS, IPS, KAS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಕೋಚಿಂಗ್ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭಾಗವಹಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳು IAS, IPS ಮುಂತಾದ ಹುದ್ದೆಯನ್ನು ಅಲಂಕರಿಸುವ ಮೂಲಕ ಜಿಲ್ಲೆಯ ಅಭಿವೃದ್ದಿಗೆ ವಿಶೇಷ ಕೊಡುಗೆ ನೀಡುವಂತಾಗಲಿ ಎಂದು ಶುಭ ಹಾರೈಸಿದರು.


ಸಮಾರಂಭದಲ್ಲಿ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, SMS ಕಾಲೇಜಿನ ಪ್ರಾಂಶುಪಾಲರಾದ ರಾಬರ್ಟ್ ರಾಡ್ರಿಗಸ್, ಯೂನಿವರ್ಸಲ್ ಕೋಚಿಂಗ್ ಸೆಂಟರ್ ಪ್ರಬಂಧಕರಾದ ಸಂತೋಷ್ ಶೆಟ್ಟಿ ಜಪ್ತಿ, ಜನಸೇವಾ ಟ್ರಸ್ಟ್ ಗಿಳಿಯಾರಿನ ಪ್ರಮುಖರಾದ ವಸಂತ ಗಿಳಿಯಾರು ಹಾಗೂ ಸಂಸ್ಥೆಯ ಪದಾಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

























































































































