


ಉಳೆಪಾಡಿಯಲ್ಲಿ ಮಹೇಶ್ ಶೆಟ್ಟಿ ತೆಳ್ಳಾರ್, ಗಿರೀಶ್ ಶೆಟ್ಟಿ ತೆಳ್ಳಾರ್, ಸುದೇಶ್ ಶೆಟ್ಟಿ ತೆಳ್ಳಾರ್, ರಾಜೇಶ್ ಶೆಟ್ಟಿ ತೆಳ್ಳಾರ್, ಭಾಸ್ಕರ ಶೆಟ್ಟಿ ಕುಡ್ಡುಲಾಜೆ ತೆಳ್ಳಾರ್, ದೇಜಪ್ಪ ಶೆಟ್ಟಿ ಮನೆ ಕುಟುಂಬಸ್ಥರು ಉಳೆಪಾಡಿಯಲ್ಲಿ ನಿರ್ಮಿಸಿದ ನೂತನ ಧರ್ಮಚಾವಡಿಯಲ್ಲಿ ಧರ್ಮದೈವಗಳ ಪುನರ್ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ನೇಮೋತ್ಸವ ಮೇ 07 ರಿಂದ 8 ರವರೆಗೆ ನಡೆಯಿತು. ಧರ್ಮಚಾವಡಿಯಲ್ಲಿ ಧರ್ಮದೈವಗಳ ಪುನರ್ ಪ್ರತಿಷ್ಠೆ ಕಲಶಾಭಿಷೇಕ ಹಾಗೂ ನೇಮೋತ್ಸವ ಸಂದರ್ಭದಲ್ಲಿ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ, ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಪೂಜ್ಯ ಮಾಣಿಲ ಶ್ರೀ ಮೋಹನದಾಸ್ ಪರಮಹಂಸ ಸ್ವಾಮೀಜಿ ಹಾಗೂ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ರಾಮದಾಸ್ ರವರು ಉಪಸ್ಥಿತರಿದ್ದು ಕುಟುಂಬಸ್ಥರಿಗೆ ಆಶೀರ್ವಾದ ನೀಡಿದರು.




ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಬಂಟರ ಸಂಘ ಮುಂಬಯಿಯ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್.ಕೆ ಶೆಟ್ಟಿ, ಬಂಟರ ಸಂಘ ಮುಂಬಯಿಯ ಜೊತೆ ಕೋಶಾಧಿಕಾರಿ ಶಶಿಧರ್ ಶೆಟ್ಟಿ ಇನ್ನಂಜೆ, ಬಂಟರ ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಇಂದ್ರಾಳಿ, ಒಕ್ಕೂಟದ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಮುಂಬಯಿ ಬಂಟರ ಸಂಘದ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಕೊಟ್ರಪಾಡಿ, ರವಿ ಶೆಟ್ಟಿ ಜತ್ತಬೆಟ್ಟು ಉಪಸ್ಥಿತರಿದ್ದರು. ಗ್ರಾಮದ ಮುಖಂಡರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡು ಧೈವದ ಕೃಪೆಗೆ ಪಾತ್ರರಾಗಿ ಪ್ರಸಾದ, ಅನ್ನದಾನವನ್ನು ಸ್ವೀಕರಿಸಿದರು. ಪಾಲ್ಗೊಂಡಿದ್ದ ಗಣ್ಯರನ್ನು ಉಳೆಪಾಡಿ ಶ್ರೀ ದೇಜಪ್ಪ ಶೆಟ್ಟಿ ಮನೆ ಕುಟುಂಬಸ್ಥರು ಪ್ರಸಾದ ನೀಡಿ ಗೌರವಿಸಿದರು.





























































































































