


ಮುಂಬಯಿ ವಿದ್ಯಾವಿಹಾರ್ ಪಶ್ಚಿಮದ ಗಾಮ್ದೇವಿ ಅಂಬಿಕಾ ದೇವಿ, ಶ್ರೀ ಆದಿನಾಥೇಶ್ವರ, ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವವು ಮೇ 16 ರಂದು ಶನಿವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಕ್ಷೇತ್ರದ ಪ್ರಧಾನ ಅರ್ಚಕರಾದ ಪೆರ್ಣಂಕಿಲ ಹರಿದಾಸ್ ಭಟ್ ಅವರ ಪೌರೋಹಿತ್ಯದಲ್ಲಿ ಬೆಳಿಗ್ಗೆ 8 ಗಂಟೆಗೆ ಪ್ರಾರ್ಥನೆ, ಆ ಬಳಿಕ ದ್ವಾದಶ ನಾರಿಕೇಳ ಮಹಾಗಣಯಾಗ, ಶ್ರೀ ಮಹಾಗಣಪತಿ ದೇವರಿಗೆ ನವಕ ಪ್ರಧಾನ, ಶ್ರೀ ದುರ್ಗಾ ಪಂಚಮಂತ್ರ ಹೋಮ, ಬೆಳಿಗ್ಗೆ 11 ರಿಂದ ಕಳಶಾಭಿಷೇಕ, ಮಧ್ಯಾಹ್ನ 12 ರಿಂದ ಅಂಬಿಕಾ ಪ್ರಸನ್ನ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ. ಸಾಯಂಕಾಲ 6:30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ದುರ್ಗಾ ನಮಸ್ಕಾರ ಪೂಜೆ, ರಂಗ ಪೂಜೆ, ಪಲ್ಲಕ್ಕಿ ಉತ್ಸವ, ರಾತ್ರಿ ಪೂಜೆ ಆ ಬಳಿಕ ಪ್ರಸಾದ ವಿತರಣೆ ಜರಗಲಿದೆ.


ಈ ವಾರ್ಷಿಕ ಉತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಅಂಬಿಕಾ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಪ್ರಧಾನ ಅರ್ಚಕರಾದ ವೇದಮೂರ್ತಿ ಪೆರ್ಣಂಕಿಲ ಹರಿದಾಸ್ ಭಟ್, ಅಧ್ಯಕ್ಷರಾದ ಗುರುದಾಸ್ ಗೋಪಾಲ್ ಶೆಟ್ಟಿ, ಆಡಳಿತ ಮೊಕ್ತೇಸರರಾದ ಹರಿದಾಸ್ ಗೋಪಾಲ್ ಶೆಟ್ಟಿ, ಎಲ್ಲಾ ಟ್ರಸ್ಟಿಗಳು ಮತ್ತು ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.

























































































































