

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇವರ ಸಹಯೋಗದಲ್ಲಿ ನಡೆದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವದಲ್ಲಿ ಯುವ ಉದ್ಯಮಿ, ಕ್ರೀಡಾ ಪೋಷಕ, ಚಿತ್ರನಟ ಹಾಗೂ ಸಮಾಜಸೇವಕರಾದ ಸಂದೀಪ್ ಪುರಂದರ ಶೆಟ್ಟಿಯವರಿಗೆ ‘ದತ್ತಿನಿಧಿ ಪ್ರಶಸ್ತಿ’ ಪ್ರದಾನ ನೀಡಿ ಗೌರವಿಸಿತು. ಮೇ 16 ರಂದು ನಡೆದ ಅಭೂತಪೂರ್ವ ಕಾರ್ಯಕ್ರವನ್ನು ಕರ್ನಾಟಕ ಸರಕಾರದ ಸಣ್ಣ ನೀರಾವರಿ ಸಚಿವರಾದ ಎನ್ ಎಸ್ ಭೋಸರಾಜು ಉದ್ಘಾಟಿಸಿದರೆ, ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅರಿಬೈಲು ಗೋಪಾಲ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ಬಿ.ಎನ್, ಶ್ರೀನಿವಾಸ ನಾಯಕ್ ಇಂದಾಜೆ, ರಾಧಾಕೃಷ್ಣ ಕೆ ಉಳಿಯತ್ತಡ್ಕ, ಶಿವಾನಂದ ಕೋಟ್ಯಾನ್, ಶಿವ ರೆಡ್ಡಿ ಖ್ಯಾಡೆದ್, ಎನ್ ಚನಿಯಪ್ಪ ನಾಯ್ಕ, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್ ಸುಬ್ಬಯ್ಯಕಟ್ಟೆ ಮತ್ತಿತರು ಉಪಸ್ಥಿತರಿದ್ದರು.



























































































































