
ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಂಚಾಲಕರಾಗಿ ಸಹಕಾರ ರತ್ನ ದಂಬೆಕ್ಕಾನ ಸದಾಶಿವ ರೈಯವರು ಆಯ್ಕೆಯಾಗಿದ್ದಾರೆ. ನೂತನ ಸಂಚಾಲಕರಾಗಿ ಆಯ್ಕೆಯಾದ ದಂಬೆಕ್ಕಾನ ಸದಾಶಿವ ರೈಯವರು ಸಹಕಾರ ಕ್ಷೇತ್ರದಲ್ಲಿ ಅಪಾರವಾದ ಅನುಭವವನ್ನು ಹೊಂದಿದ್ದಾರೆ. ರೋಯಲ್ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದು, ಡಾ. ಪಿ.ಬಿ ಪ್ರತಿಷ್ಠಾನದ ರೂವಾರಿ, ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ಪುತ್ತೂರು ವಿಶ್ವ ಹಿಂದೂ ಪರಿಷತ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಪುತ್ತೂರು ತಾಲೂಕು ಬಂಟರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.































































































































