
ಬೆಂಗಳೂರು ಬಂಟರ ಸಂಘದ ಸಮಾಜ ಸೇವಾ ಸಮಿತಿ ಮತ್ತು ಸೇವಾದಳ ಆಯೋಜನೆ ಮಾಡಿರುವ ಸೇವಾ ಸಮಾಗಮ ಕಾರ್ಯಕ್ರಮದಲ್ಲಿ ಸುಮಾರು 46 ಮಂದಿಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು. ಈ ಸಂಧರ್ಭ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ವಿಜಯ್ ಶೆಟ್ಟಿ ಹಾಲಾಡಿ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ, ಉಪಾಧ್ಯಕ್ಷ ಜಪ್ತಿ ಸಂತೋಷ್ ಶೆಟ್ಟಿ, ಮಹಿಳಾ ಉಪಾಧ್ಯಕ್ಷೆ ಕಾಂತಿ ಶೆಟ್ಟಿ, ಕೋಶಾಧಿಕಾರಿ ಅಶೋಕ್ ಶೆಟ್ಟಿ, ಸಮಾಜ ಸೇವಾ ಸಮಿತಿ ಮತ್ತು ಸೇವಾದಳದ ಛೇರ್ಮನ್ ಪ್ರತಾಪ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.































































































































