

ಹುಬ್ಬಳ್ಳಿ ಧಾರವಾಡ ಬಂಟರ ಸಂಘದ 2026-28 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನೆರವೇರಿದ್ದು, ಸಂಘದ ನೂತನ ಅಧ್ಯಕ್ಷರಾಗಿ ರಾಜೇಂದ್ರ ವಿ. ಶೆಟ್ಟಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮೇ 28 ರಂದು ಸಂಘದ ಸಭಾಂಗಣದಲ್ಲಿ ಹಾಲಿ ಅಧ್ಯಕ್ಷ ವಿಜಯಾನಂದ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಥಮ ಕಾರ್ಯಕಾರಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಭೆಯಲ್ಲಿ ಉಪಾಧ್ಯಕ್ಷರಾಗಿ ಸುಧೀರ್ ಜೆ. ಶೆಟ್ಟಿ ಹಾಗೂ ಶ್ರೀನಿವಾಸ ಶೆಟ್ಟಿ (ಧಾರವಾಡ), ಕಾರ್ಯದರ್ಶಿಯಾಗಿ ರತ್ನಾಕರ್ ಎಂ. ಶೆಟ್ಟಿ (ಕರಾವಳಿ ಕ್ಯಾಟರ್ಸ್), ಖಜಾಂಚಿಯಾಗಿ ದಿನೇಶ್ ಕೆ. ಶೆಟ್ಟಿ (ಗ್ಲೋಬಲ್ ಮೀಡಿಯಾ) ಹಾಗೂ ಜೊತೆ ಕಾರ್ಯದರ್ಶಿಯಾಗಿ ಜ್ಯೋತಿ ಆರ್.ಟಿ ಶೆಟ್ಟಿ ಅವರನ್ನು ಸರ್ವಸಮ್ಮತಿಯಿಂದ ಆಯ್ಕೆ ಮಾಡಲಾಯಿತು.


ಉಳಿದ ಪದಾಧಿಕಾರಿಗಳ ನೇಮಕಾತಿಯ ಜವಾಬ್ದಾರಿಯನ್ನು ನೂತನ ಅಧ್ಯಕ್ಷ ರಾಜೇಂದ್ರ ವಿ. ಶೆಟ್ಟಿ ಅವರಿಗೆ ವಹಿಸಲಾಗಿದೆ ಎಂದು ನಿಕಟ ಪೂರ್ವ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





























































































































