

ಸಾಮಾಜಿಕ ಜಾಲತಾಣಗಳ ಪ್ರಭಾವ, ಶೈಕ್ಷಣಿಕ ಒತ್ತಡ, ಬದಲಾಗುತ್ತಿರುವ ಜೀವನ ಶೈಲಿ ಸಹಿತ ಹಲವಾರು ಕಾರಣಗಳಿಂದ ಹದಿಹರೆಯದವರು ಖಿನ್ನತೆಗೆ ಒಳಗಾಗುತ್ತಿದ್ದಾರೆ. ಹದಿಹರೆಯದವರ ಮಾನಸಿಕ ಆರೋಗ್ಯ ದೈಹಿಕ ಆರೋಗ್ಯದಷ್ಟೇ ಮುಖ್ಯ. ಆತ್ಮಸ್ಥೈರ್ಯ ಹಾಗೂ ಸಕರಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳುವ ಮೂಲಕ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಹೇಳಿದರು. ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ವತಿಯಿಂದ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಭಾಗಿತ್ವದಲ್ಲಿ ಸಮಾಲೋಚನೆ ಮತ್ತು ಹದಿಹರೆಯದ ಮಾನಸಿಕ ಆರೋಗ್ಯ ಸರ್ಟಿಫಿಕೇಟ್ ಕೋರ್ಸ್ ಪೂರೈಸಿದ ದ್ವಿತೀಯ ಬ್ಯಾಚ್ ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಸೊಸೈಟಿಯ ಪ್ರೇರಣಾ ಸಭಾಂಗಣದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.


ವಿದ್ಯಾರ್ಥಿನಿಯರಾದ ಸುಕನ್ಯಾ ಮತ್ತು ಶೋಭಾರಾಣಿ ಅನಿಸಿಕೆ ವ್ಯಕ್ತಪಡಿಸಿದರು. ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಖಾಜಾಂಚಿ ಗುರುದತ್ ನಾಯಕ್, ನಿರ್ದೇಶಕರಾದ ಡಾ. ಸತೀಶ್ ರಾವ್, ಪಿ.ಬಿ. ಹರೀಶ್ ರೈ ಉಪಸ್ಥಿತರಿದ್ದರು. ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ ವಂದಿಸಿದರು.





























































































































