


ಬಂಟರ ಸಂಘ (ರಿ) ಸುರತ್ಕಲ್ ಇದರ ವಾರ್ಷಿಕ ಮಹಾಸಭೆ ಮತ್ತು ಅಭಿನಂದನೆ, ಸಹಾಯ ಹಸ್ತ, ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಜೂನ್ 14 ರಂದು ಭಾನುವಾರ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಮಕ್ಕಳಿಂದ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ವಿಶೇಷ ಮಹಾಸಭೆ, 11 ಗಂಟೆಗೆ ವಾರ್ಷಿಕ ಮಹಾಸಭೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಗ್ರಾಮವಾರು ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ. ಸಂಜೆ 4.30 ಕ್ಕೆ ಸಭಾ ಕಾರ್ಯಕ್ರಮ, ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಬಾಳ ಜಗನ್ನಾಥ ಶೆಟ್ಟಿ ವಹಿಸಲಿದ್ದಾರೆ. ಸಮಾರಂಭವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಲಿದ್ದಾರೆ.



ಮುಖ್ಯ ಅತಿಥಿಗಳಾಗಿ ಮುಂಬಯಿ ವಿ.ಕೆ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು, ಮುಂಬಯಿ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಡಾ. ಪಿ.ವಿ ಶೆಟ್ಟಿ ಮುಂಬಯಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಸಿಎ ಅಶೋಕ್ ಶೆಟ್ಟಿ ಎಂ, ಪಡುಬಿದ್ರೆ ಬಂಟರ ಸಂಘದ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಭಾರತೀಯ ಭೂಸೇನೆಯ ನಿವೃತ್ತ ಸೇನಾಧಿಕಾರಿ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಭಿನ್ನ ಸಾಮರ್ಥ್ಯ ಹಾಗೂ ವಿಕಲಚೇತನರಿಗೆ ಸಹಾಯಹಸ್ತ, ನಿರಂತರ ವಿದ್ಯಾರ್ಥಿ ವೇತನ, ದತ್ತಿನಿಧಿ ವಿತರಣೆ, ಶೈಕ್ಷಣಿಕ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಅಭಿನಂದನೆ, ಸನ್ಮಾನ ನಡೆಯಲಿದೆ ಎಂದು ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





























































































































