
ಗ್ರಾಮೀಣ ಪ್ರದೇಶದ ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಬೇಕು. ಈ ಮೂಲಕ ಗ್ರಾಮದ ಅಭಿವೃದ್ದಿ ಆಗಬೇಕು ಎಂದು ಉದ್ಯಮಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಹೇಳಿದರು. ಅವರು ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾರ್ಥಮಿಕ ಶಾಲೆ ಕರ್ನಿರೆ ಇಲ್ಲಿನ ವಿದ್ಯಾರ್ಥಿಗಳಿಗೆ ತಮ್ಮ ಪ್ರಾಯೋಜಕತ್ವದಲ್ಲಿ ಉಚಿತ ಪುಸ್ತಕ ವಿತರಿಸಿ ಮಾತನಾಡಿ, ಕಳೆದ 30 ವರ್ಷಗಳಿಂದ ಇಲ್ಲಿನ ಮಕ್ಕಳಿಗೆ ಪುಸ್ತಕ ಕೊಡುತ್ತಿದ್ದೇನೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ಕೊರತೆ ಆಗಬಾರದು ಎಂಬುದೇ ನನ್ನ ಮೂಲ ಉದ್ದೇಶವಾಗಿದೆ ಎಂದರು.

ಕನ್ನಡ ಉಳಿಸಿ ಬೆಳೆಸಿ ಸಂಘಟನೆಯ ದ.ಕ, ಉಡುಪಿ ಜಿಲ್ಲಾಧ್ಯಕ್ಷ ವಾಸುದೇವ ರಾವ್ ಮಾತನಾಡಿ, ಕರ್ನಿರೆ ವಿಶ್ವನಾಥ ಶೆಟ್ಟಿಯವರ ಸಮಾಜಮುಖಿ ಚಿಂತನೆಗಳು ಅಭಿನಂದನೀಯವಾದುದು. ಕಳೆದ ಕೆಲ ವರ್ಷಗಳಿಂದ ಅವರ ಸಾಮಾಜಿಕ ಚಟುವಟಿಕೆಗಳನ್ನು ಕಂಡಿದ್ದೇನೆ. ಬಡವರ ಬಗ್ಗೆ ವಿಶೇಷ ಕಾಳಜಿ ಹೊಂದಿದವರಾಗಿದ್ದಾರೆ. ಗ್ರಾಮೀಣ ಪ್ರದೇಶದ ಶಾಲೆ ಉಳಿಸಿ ಬೆಳೆಸಲು ಅವರ ಕೊಡುಗೆ ಅಭಿನಂದನೀಯ ಎಂದರು. ಈ ಸಂದರ್ಭ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಹರಿಶ್ಚಂದ್ರ ಶೆಟ್ಟಿ ಕರ್ನಿರೆ, ಮೋಹನ್ ಶೆಟ್ಟಿ ಕರ್ನಿರೆ, ಸಂಜಿತ್ ಶೆಟ್ಟಿ, ಪ್ರಭಾಕರ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಹಮ್ಮದ್ ಶರೀಪ್ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭ ಕನ್ನಡ ಉಳಿಸಿ ಬೆಳೆಸಿ ಸಂಘಟನೆಯ
ಸಂಘಟನೆಯ ಅಧ್ಯಕ್ಷ ವಾಸುದೇವ ರಾವ್ ಅವರನ್ನು ಗೌರವಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೂಲಿಯೇಟ್ ಲೂವೀಸ್ ಸ್ವಾಗತಿಸಿ, ಶಿಕ್ಷಕ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು.






















































































































