

ಯುವ ಬಂಟರ ಸಂಘ ಮೂಡುಬಿದಿರೆಯ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಸಮಾಜ ಸೇವಕ, ಧಾರ್ಮಿಕ ಮುಖಂಡ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಹಾಗೂ ಸಮರ್ಥ ಬಿಲ್ಡರ್ಸ್ ನ ಆಡಳಿತ ನಿರ್ದೇಶಕರಾದ ಬೆಳುವಾಯಿ ಸಂದೀಪ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉದ್ಯಮ ಕ್ಷೇತ್ರದ ಸಾಧನೆಗಾಗಿ 2025 ರ ಸಾಲಿನ ಶ್ರೀ ಯಕ್ಷದೇವ ಸಾಧನಾ ಪುರಸ್ಕಾರ ಪಡೆದ ಸಂದೀಪ್ ಶೆಟ್ಟಿಯವರು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಯಶಸ್ವೀ ಸಂಘಟಕರಾಗಿಯೂ, ಸಮಾಜ ಸೇವಕರಾಗಿಯೂ ಗುರುತಿಸಿಕೊಂಡಿದ್ದಾರೆ.































































































































