ಬೈಂದೂರು ಬಂಟರ ಯಾನೆ ನಾಡವರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ, ಶ್ರೀ ಮಹಾಲಿಂಗೇಶ್ವರ ಕನ್ಸ್ಟ್ರಕ್ಷನ್ ನ ಆಡಳಿತ ನಿರ್ದೇಶಕರಾದ ಗಾಯಾಡಿ ಗೋಕುಲ ಶೆಟ್ಟಿ ಉಪ್ಪುಂದ ಅವರು ಅವಿರೋಧವಾಗಿ ಪುನರಾಯ್ಕೆಯಾದರು. ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ನೂತನ ಅಧ್ಯಕ್ಷರನ್ನು ಈ ಸಂಧರ್ಭದಲ್ಲಿ ಅಭಿನಂದಿಸಿದರು.