


ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ನಡೆಯಲಿರುವ 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂಚಾಲಕರಾಗಿ ಉದ್ಯಮಿ ಹಾಗೂ ಸಮಾಜಸೇವಕರಾದ ಜಯಶೀಲ ಅಡ್ಯಾಂತಾಯರವರು ಆಯ್ಕೆಯಾದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಪ್ರಧಾನ ಕಾರ್ಯದರ್ಶಿ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಸಿದ್ಧಿವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣಪ್ರಸಾದ್ ರೈ, ಕಾರ್ಯಕಾರಿ ಸಮಿತಿ ಸದಸ್ಯರಾದ ಉಮೇಶ್ ರೈ ಮೇಗಿನಮನೆ, ಮನೀಶ್ ರೈ ಅಡ್ಯಾರ್, ವಸಂತ ಶೆಟ್ಟಿ ಜೆಪ್ಪು, ಜಗದೀಶ್ ಶೆಟ್ಟಿ ಬಿಜೈ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ಎಂ ಸುಂದರ ಶೆಟ್ಟಿ, ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ದಿವಾಕರ ಸಾಮಾನಿ ಚೇಳ್ಯಾರು ಗುತ್ತು, ಮತ್ತಿತರರು ಉಪಸ್ಥಿತರಿದ್ದರು.


ಜಯಶೀಲ ಅಡ್ಯಂತಾಯ ಅವರು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪೋಷಕರಾಗಿ, ಬಸ್ಸು ಮಾಲಕರ ಸಂಘದ ಮಾಜಿ ಅಧ್ಯಕ್ಷರಾಗಿ, ಎಪಿಎಂಸಿಯ ಮಾಜಿ ಸದಸ್ಯರಾಗಿ, ದ.ಕ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಅಡ್ಯಾರು ಪಕ್ಷಿಕೃಷ್ಣ ಮಹಾವಿಷ್ಣು ದೇವಸ್ಥಾನದ ಕೋಶಾಧಿಕಾರಿಯಾಗಿ, ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿ ಸದಸ್ಯರಾಗಿ, ಅಡ್ಯಾರು ಗ್ರಾಮ ಪಂಚಾಯತ್ ಸದಸ್ಯರಾಗಿ ದುಡಿದವರು. ಅಡ್ಯಾರು ಫ್ಯಾಮಿಲಿ ಟ್ರಸ್ಟ್ ಉಪಾಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸುತ್ತಿರುವ ಜಯಶೀಲ ಅಡ್ಯಾಂತಾಯ ಅವರು ಬಂಟ್ಸ್ ಹಾಸ್ಟೇಲ್ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಗಣೇಶೋತ್ಸವ ಸಮಿತಿಯ ಸಂಚಾಲಕರಾಗಿ ಆಯ್ಕೆಯಾಗಿ, ಗಣೇಶನ ಸೇವೆ ಮಾಡಲು ಒಂದು ಅವಕಾಶ ದೊರೆತಿದೆ. ಎಲ್ಲರೂ ಸಹಕಾರ ನೀಡಿ ಗಣೇಶೋತ್ಸವವನ್ನು ಯಶಸ್ವಿಗೊಳಿಸೋಣ ಎಂದರು.




























































































































