
2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ವತಿಯಿಂದ ಬ್ರಹ್ಮಾವರ ವಲಯದ ಸಂಚಾಲಕಿಯಾಗಿ ಶ್ರೀಮತಿ ಆಶಾ ಎ. ಹೆಗ್ಡೆ ಅವರನ್ನು ಮರು ನೇಮಕ ಮಾಡಲಾಗಿದೆ. ಆರೋಗ್ಯ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಆಶಾ ಎ. ಹೆಗ್ಡೆ ಅವರು ಶ್ರೀದೇವಿ ಕ್ಲಿನಿಕಲ್ ಲ್ಯಾಬೋರೇಟರಿ, ಶ್ರೀದೇವಿ ಹೆಲ್ತ್ ಕೇರ್ ಮತ್ತು ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಮಂದಾರ್ತಿಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮಾನವ ಹಕ್ಕುಗಳು ಮತ್ತು ಮಹಿಳಾ ಮಕ್ಕಳ ಕಲ್ಯಾಣ ಸಂಸ್ಥೆಯ ಕರ್ನಾಟಕ ಉಪಾಧ್ಯಕ್ಷೆ, ಸಹಕಾರ ಭಾರತಿಯ ಉಡುಪಿ ಜಿಲ್ಲಾ ಮಹಿಳಾ ಪ್ರಮುಖೆ ಸೇರಿದಂತೆ ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ.


ಅವರ ಸಮಾಜಸೇವೆ, ಸಂಘಟನಾ ಸಾಮರ್ಥ್ಯ ಹಾಗೂ ತುಳು ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಬದ್ಧತೆಯನ್ನು ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಅಂತರಾಷ್ಟ್ರೀಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕೇಂದ್ರೀಯ ಅಧ್ಯಕ್ಷ ಡಾ. ಅವಿನ್ ಬಿ.ಆರ್ ಆಳ್ವ, ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಚಡ ಹಾಗೂ ಪ್ರಧಾನ ಸಂಚಾಲಕ ವಿಶ್ವನಾಥ ಆಚಾರ್ಯ ಪೆರ್ಡೂರು ಅವರು ಬ್ರಹ್ಮಾವರ ವಲಯ ಸಂಚಾಲಕಿಯಾಗಿ ಮರು ನೇಮಕಗೊಳಿಸಿದ್ದಾರೆ. ಈ ಮರು ನೇಮಕವನ್ನು ತುಳುವರ್ಲ್ಡ್ ಫೌಂಡೇಶನ್ ನ ಗೌರವಾಧ್ಯಕ್ಷ ಶ್ರೀ ಹರಿನಾರಾಯಣದಾಸ ಅಸ್ರಣ್ಣ, ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ಕಾರ್ಯದರ್ಶಿ ವಸಂತ ರೈ ಹಾಗೂ ನಿರ್ದೇಶಕ ಡಾ| ರಾಜೇಶ್ ಕೃಷ್ಣ ಆಳ್ವ ಅವರು ಸ್ವಾಗತಿಸಿ, ಆಶಾ ಎ. ಹೆಗ್ಡೆ ಅವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.




























































































































