
2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ವತಿಯಿಂದ ಪುತ್ತೂರು ವಲಯದ ಸಂಚಾಲಕರಾಗಿ ಮನೋಹರ ರೈ ಅವರನ್ನು ನೇಮಕ ಮಾಡಲಾಗಿದೆ. ಮನೋಹರ ರೈ ಅವರು ಪ್ರಸ್ತುತ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಮಂಗಳೂರು ಇಲ್ಲಿ ಸೇವೆ ಸಲ್ಲಿಸುತ್ತಿದ್ದು, ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರ ಸೇವಾ ಮನೋಭಾವ, ಸಂಘಟನಾ ಸಾಮರ್ಥ್ಯ ಹಾಗೂ ತುಳು ಭಾಷೆ, ಸಂಸ್ಕೃತಿ ಮತ್ತು ತಾಯ್ನಾಡಿನ ಮೇಲಿನ ಬದ್ಧತೆಯನ್ನು ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಅಂತರರಾಷ್ಟ್ರೀಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕೇಂದ್ರೀಯ ಅಧ್ಯಕ್ಷ ಡಾ. ಅವಿನ್ ಬಿ.ಆರ್ ಆಳ್ವ, ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಚಡ ಹಾಗೂ ಪ್ರಧಾನ ಸಂಚಾಲಕ ವಿಶ್ವನಾಥ ಆಚಾರ್ಯ ಪೆರ್ಡೂರು ಅವರು ಪುತ್ತೂರು ವಲಯ ಸಂಚಾಲಕರಾಗಿ ನೇಮಕಗೊಳಿಸಿದ್ದಾರೆ.


2028ರ ಶತಮಾನೋತ್ಸವದ ಅಂಗವಾಗಿ ತುಳು ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆ, ತುಳುವ ನಾಗರಿಕತೆಯ ವೈಭವವನ್ನು ಮರು ಸ್ಥಾಪಿಸುವುದು, ತುಳು ಭಾಷೆಗೆ ಸಂವಿಧಾನಾತ್ಮಕ ಮಾನ್ಯತೆ ದೊರಕಿಸುವ ಹೋರಾಟವನ್ನು ಬಲಪಡಿಸುವುದು ಹಾಗೂ ಪುತ್ತೂರು ವಲಯದಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅವರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಮಹಾಸಭೆ ತಿಳಿಸಿದೆ. ಈ ನೇಮಕವನ್ನು ತುಳುವರ್ಲ್ಡ್ ಫೌಂಡೇಶನ್ ನ ಗೌರವಾಧ್ಯಕ್ಷ ಶ್ರೀ ಹರಿನಾರಾಯಣದಾಸ ಅಸ್ರಣ್ಣ, ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ಕಾರ್ಯದರ್ಶಿ ವಸಂತ ರೈ ಹಾಗೂ ನಿರ್ದೇಶಕ ಡಾ| ರಾಜೇಶ್ ಕೃಷ್ಣ ಆಳ್ವ ಅವರು ಹರ್ಷದಿಂದ ಸ್ವಾಗತಿಸಿ, ಮನೋಹರ ರೈ ಅವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.






























































































































