ನವಚೇತನ ಫ್ರೆಂಡ್ಸ್ ಸರ್ಕಲ್ ಕೃಷ್ಣಾಪುರ ಹನುಮನಗರದ ವಾರ್ಷಿಕ ಮಹಾಸಭೆ ಹಾಗೂ 2026 -27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷರಾಗಿ ಸುಧಾಕರ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ಸಂಘದ ಪೋಷಕರಾದ ಸುಧಾಕರ ಶೆಟ್ಟಿ, ಗೌರವಾಧ್ಯಕ್ಷರಾದ ಸುಧಾಕರ ದೇವಾಡಿಗ, ಬಾಲಕೃಷ್ಣ ಶೆಟ್ಟಿ, ಕರುಣಾಕರ ದೇವಾಡಿಗ, ಲೋಕನಾಥ ಶೆಟ್ಟಿ ಸಭೆಯಲ್ಲಿ ಸಲಹೆ ಸೂಚನೆ ನೀಡಿದರು. ಪ್ರಧಾನ ಕಾರ್ಯದರ್ಶಿ ಸಂದೀಪ್ ಶೆಟ್ಟಿ ವರದಿ ವಾಚಿಸಿದರು. ಕೋಶಾಧಿಕಾರಿ ಭರತೇಶ್ ದೇವಾಡಿಗ ಲೆಕ್ಕ ಪತ್ರ ಮಂಡಿಸಿದರು. ಅಧ್ಯಕ್ಷರಾದ ಹೇಮಂತ್ ಶೆಟ್ಟಿ ಸ್ವಾಗತಿಸಿದರು. ಸಂದೀಪ್ ಶೆಟ್ಟಿ ವಂದಿಸಿದರು.






















































































































