ಗ್ರಾಮೀಣ ಭಾಗದಲ್ಲಿ ಆರಂಭಗೊಂಡ ಬನ್ನಾಡಿ ವಡ್ಡರ್ಸೆ ಲಯನ್ಸ್ ಕ್ಲಬ್ ಅತ್ಯಲ್ಪ ಅವಧಿಯಲ್ಲೇ ಬಸ್ಸು ತಂಗುದಾಣ ನಿರ್ಮಾಣ, ಪಾರ್ಕ್ ನಿರ್ಮಾಣ ಸೇರಿದಂತೆ ಹತ್ತು ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಎಲ್ಲಾ ಕ್ಲಬ್ ಗಳಿಗೂ ಮಾದರಿಯಾಗಿದೆ ಎಂದು ಲಯನ್ಸ್ ನ ಪ್ರಥಮ ಉಪ ಜಿಲ್ಲಾ ಗವರ್ನರ್ ಪಿ.ಎಮ್.ಜೆ.ಎಫ್ ಲಯನ್ ಹರಿಪ್ರಸಾದ್ ರೈ ತಿಳಿಸಿದರು. ಅವರು ಜುಲೈ 25 ರಂದು ಬನ್ನಾಡಿ ಸುಬ್ಬಣ್ಣ ಹೆಗ್ಡೆ ಸಭಾಂಗಣದಲ್ಲಿ ಜರಗಿದ ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕ್ಲಬ್ನ ನೂತನ ಅಧ್ಯಕ್ಷರಾಗಿ ವಿಜಯ ಬ್ಯಾಂಕ್ನ ನಿವೃತ್ತ ಪ್ರಬಂಧಕ ಎಂ.ಜೆ.ಎಫ್ ಬನ್ನಾಡಿ ಪ್ರಭಾಕರ ಶೆಟ್ಟಿ ಅಧಿಕಾರ ವಹಿಸಿಕೊಂಡು ಮಾತನಾಡಿ, ಲಯನ್ಸ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಲು ಅತ್ಯಂತ ಸಂತೋಷವಾಗುತ್ತದೆ. ನನ್ನ ವ್ಯಾಪ್ತಿಯಲ್ಲಿ ಸಾಧ್ಯವಾಗುವ ಸೇವಾ ಚಟುವಟಿಕೆ ನಿರ್ವಹಿಸುತ್ತೇನೆ ಎಂದರು. ಕ್ಲಬ್ ನ ನೂತನ ಕಾರ್ಯದರ್ಶಿಯಾಗಿ ವಿಜಯ ಬ್ಯಾಂಕ್ ನ ನಿವೃತ್ತ ಪ್ರಬಂಧಕ ಬನ್ನಾಡಿ ಸುಭಾಶ್ಚಂದ್ರ ಶೆಟ್ಟಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಬ್ಯಾಂಕ್ನ ನಿವೃತ್ತ ಪ್ರಬಂಧಕ ಉಪ್ಲಾಡಿ ಸುಗುಣಾಕರ ಶೆಟ್ಟಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭ ಎಸೆಸೆಲ್ಸಿ, ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ಮಕ್ಕಳಿಗೆ ಗೌರವ, ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬನ್ನಾಡಿ ಮಧುರಾ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು. ಆರ್ಥಿಕ ಅಶಕ್ತರಿಗೆ ಸಹಾಯಧನ ವಿತರಿಸಲಾಯಿತು.



ಲಯನ್ಸ್ ಸಮನ್ವಯಾಧಿಕಾರಿ ಬಿ. ಅರುಣ್ ಕುಮಾರ್ ಹೆಗ್ಡೆ, ಝೋನ್ ಚೇರ್ ಪರ್ಸನ್ ಬನ್ನಾಡಿ ಪ್ರವೀಣ್ ಹೆಗ್ಡೆ, ರೀಜನ್ ಸೆಕ್ರೆಟರಿ ಆಶಾ ಶಿವರಾಮ ಶೆಟ್ಟಿ, ನಿರ್ಗಮನ ಅಧ್ಯಕ್ಷ ವಡ್ಡರ್ಸೆ ಬಾಲಕೃಷ್ಣ ಶೆಟ್ಟಿ, ನಿರ್ಗಮನ ಕಾರ್ಯದರ್ಶಿ ಯಾಳಕ್ಲು ಚಂದ್ರ ಶೆಟ್ಟಿ, ಖಜಾಂಚಿ ನಿತೀಶ್ ಆಚಾರ್ಯ ಮಧುವನ, ಸ್ಥಾಪಕ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ನಿವೃತ್ತ ಉಪನ್ಯಾಸಕ ಚಂದ್ರಶೇಖರ ಶೆಟ್ಟಿ ಕಲ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು.




















































































































