2023ರ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಕುಂದಾಪುರ ತಾಲೂಕು ಯುವ ಬಂಟರ ಸಂಘ (ರಿ) ಕುಂದಾಪುರ ಇವರ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಪ್ರಶಸ್ತಿ ಪ್ರದಾನ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಆಗಸ್ಟ್ 9ರಂದು ಬೆಳಿಗ್ಗೆ 9:30 ರಿಂದ ಕುಂದಾಪುರದ ಬಂಟರ ಯಾನೆ ನಾಡವರ ಸಂಘದ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೆರವೇರಲಿದ್ದು, ಇದೇ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮತ್ತು ಕೊಡುಗೆ ನೀಡಿದ ಮಹನೀಯರ ಹೆಸರಿನಲ್ಲಿ ಸಂಸ್ಮರಣಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಹಾಗೂ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ‘ವಿದ್ಯಾ ದೀವಿಗೆ’ ಸಹಾಯಧನ ವಿತರಿಸಲಾಗುವುದು. ಹಾಗೆಯೇ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇಕಡಾ 95 ಕ್ಕಿಂತ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ನೀಡಲಾಗುವ 2026ನೇ ಸಾಲಿನ ವಿವಿಧ ಸಂಸ್ಮರಣಾ ಹಾಗೂ ವಿಶೇಷ ಪ್ರಶಸ್ತಿಗಳಿಗೆ ಭಾಜನರಾದ ಸಾಧಕರ ವಿವರಗಳನ್ನು ಪ್ರಕಟಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಪ್ರಮುಖರಿಗೆ ಈ ಗೌರವ ಸಲ್ಲಲಿದೆ. ದಿ. ಎಂ. ಮಧುಕರ್ ಶೆಟ್ಟಿ ಐ.ಪಿ.ಎಸ್. ಸಂಸ್ಮರಣಾ ಪ್ರಶಸ್ತಿಯನ್ನು ಡಾ. ಮನೋಜ್ ರಾಜನ್ (ಪ್ರಧಾನ ಮುಖ್ಯ ಪರಿಸರ ಹಾಗೂ ಅರಣ್ಯ ಸಂರಕ್ಷಣಾಧಿಕಾರಿ, ಕರ್ನಾಟಕ ಸರ್ಕಾರ), ದಿ. ಯಡ್ತರೆ ನರಸಿಂಹ ಶೆಟ್ಟಿ ಸಂಸ್ಮರಣಾ ಪ್ರಶಸ್ತಿಯನ್ನು ಇಂದ್ರಾಳಿ ಜಯಕರ ಶೆಟ್ಟಿ (ಪ್ರಧಾನ ಕಾರ್ಯದರ್ಶಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಮಂಗಳೂರು), ದಿ. ಅಪ್ಪಣ್ಣ ಹೆಗ್ಡೆ ಸಂಸ್ಮರಣಾ ಪ್ರಶಸ್ತಿಯನ್ನು ಎಸ್.ಎಸ್ ಹೆಗ್ಡೆ (ಸಿ.ಎಂ.ಡಿ. ಸೌತ್ ಫೀಲ್ಡ್ ಪೇಂಟ್ಸ್ ಪ್ರೈ.ಲಿ., ಬೆಂಗಳೂರು), ದಿ. ಕುಶಲ ಹೆಗ್ಡೆ ಶತಾಬ್ದೋತ್ಸವ ಪ್ರಶಸ್ತಿಯನ್ನು ಎ.ಬಿ ಶೆಟ್ಟಿ (ಹಿರಿಯ ವಕೀಲರು, ಕುಂದಾಪುರ), ದಿ. ಗೋಪಾಲಕೃಷ್ಣ ಶೆಟ್ಟಿ ಸಂಸ್ಮರಣಾ ಕೃಷಿಕ ಪ್ರಶಸ್ತಿಯನ್ನು ಅರುಣ್ ಕುಮಾರ್ ಶೆಟ್ಟಿ, ಗುಡ್ಡಮ್ಮಾಡಿ (ಪ್ರಗತಿಪರ ಕೃಷಿಕರು) ಈ ಸಾಧಕರಿಗೆ ಸಂಘದ ವಾರ್ಷಿಕ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

























































































































