ದುರ್ಗಾಸಿರಿ ಬಂಟರ ಮಹಿಳಾ ಸಂಘ ಶಿರ್ವ ವತಿಯಿಂದ ಆಟಿ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಸಂಭ್ರಮದಿಂದ ನಡೆಯಿತು. ವಿದ್ಯಾವರ್ಧಕ ಸಂಘ ಶಿರ್ವದ ಆಡಳಿತಾಧಿಕಾರಿ ವೈ. ಭಾಸ್ಕರ್ ಶೆಟ್ಟಿ ಅವರು ನಟ್ಟಿ ನೆಡುವ ಮೂಲಕ ಕಾರ್ಯಕ್ರಮವನ್ನು ವಿಶೇಷವಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ವಿದ್ಯಾರ್ಥಿವೇತನ ವಿತರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಎಂ.ಆರ್.ಪಿಎಲ್ನ ನಿವೃತ್ತ ಜನರಲ್ ಮ್ಯಾನೇಜರ್ ಟಿ. ವೀಣಾ ಶೆಟ್ಟಿ ಅವರು ಮಾತನಾಡಿ, ತುಳು ಸಂಸ್ಕೃತಿ, ಆಚಾರ ವಿಚಾರ ಹಾಗೂ ಪರಂಪರೆಯನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವನ್ನು ತಿಳಿಸಿದರು. ಮತ್ತೋರ್ವ ಮುಖ್ಯ ಅತಿಥಿ ಇಂದಿರಾ ಹೆಗ್ಡೆ ಅವರು ಸಂಘದ ಸದಸ್ಯೆಯರ ಒಗ್ಗಟ್ಟು ಹಾಗೂ ಕಾರ್ಯಕ್ರಮದ ಯಶಸ್ಸಿಗೆ ನೀಡಿದ ಸಹಕಾರವನ್ನು ಶ್ಲಾಘಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದುರ್ಗಾಸಿರಿ ಬಂಟರ ಮಹಿಳಾ ಸಂಘದ ಅಧ್ಯಕ್ಷೆ ಸುಮಾ ಶೆಟ್ಟಿ ಅವರು ಎಲ್ಲರ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಗೌರವಾಧ್ಯಕ್ಷೆ ಶಶಿಕಲಾ ಶೆಟ್ಟಿ ಅವರು ಇದೇ ಒಗ್ಗಟ್ಟು ಮತ್ತು ಉತ್ಸಾಹದೊಂದಿಗೆ ಸಂಘದ ಚಟುವಟಿಕೆಗಳನ್ನು ಮುಂದುವರಿಸೋಣ ಎಂದು ಕರೆ ನೀಡಿದರು. ಶಿಕ್ಷಕ ವೃತ್ತಿಯಿಂದ ನಿವೃತ್ತರಾದ ಜಯಂತಿ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಭಾಗವಹಿಸಿದ ಚಿರಂಜೀವಿ ಶೆಟ್ಟಿ ಅವರನ್ನು ಕೂಡಾ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಸಮೃದ್ಧ್ ಪಿ ಶೆಟ್ಟಿ, ದೀಕ್ಷಾ ಶೆಟ್ಟಿ ಹಾಗೂ ವನ್ಮಯಿ ಶೆಟ್ಟಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಐಶ್ವರ್ಯ ಶೆಟ್ಟಿ ಹಾಗೂ ಸಂಜನ್ ಶೆಟ್ಟಿ ಅವರಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.





ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಸಂಘದ ಸದಸ್ಯೆಯರು ತಮ್ಮ ಮನೆಗಳಲ್ಲಿ ತಯಾರಿಸಿದ ವಿವಿಧ ಆಟಿ ತಿಂಗಳ ಸಾಂಪ್ರದಾಯಿಕ ಖಾದ್ಯಗಳನ್ನು ತಂದು ಪ್ರದರ್ಶಿಸುವ ಮೂಲಕ ತುಳು ಸಂಸ್ಕೃತಿ ಮತ್ತು ಆಟಿ ಸಂಪ್ರದಾಯದ ವೈಶಿಷ್ಟ್ಯವನ್ನು ಮೆರೆದರು. ಸಂಘದ ಕಾರ್ಯದರ್ಶಿ ಸ್ಮಿತಾ ಶೆಟ್ಟಿ ಅವರು ವರದಿ ವಾಚಿಸಿದರು. ಸ್ಪೂರ್ತಿ ಶೆಟ್ಟಿ ಸ್ವಾಗತಿಸಿದರು. ಜ್ಯೋತಿ ಶೆಟ್ಟಿ ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಜಯಶ್ರೀ ಶೆಟ್ಟಿ, ಬೀನಾ ಶೆಟ್ಟಿ, ಸುಮಾ ಎಸ್. ಶೆಟ್ಟಿ ಹಾಗೂ ಶೋಭಾ ಹೆಗ್ಡೆ ಅವರು ಸಾಧಕರ ಪರಿಚಯವನ್ನು ನೀಡಿದರು. ರೇಖಾ ಶೆಟ್ಟಿ ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಸುಪ್ರೀತಾ ಶೆಟ್ಟಿ ನಿರ್ವಹಿಸಿದರು.























































































































