ಕುರ್ಲಾ ಪೂರ್ವ ಬಂಟರ ಭವನದ ಆವರಣದಲ್ಲಿ ಬಂಟರ ಸಂಘ ಮುಂಬಯಿ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ 80 ನೇಯ ಸ್ವಾತಂತ್ರ್ಯ ದಿನಾಚರಣೆಯು ಅಗಸ್ಟ್ 15 ರಂದು ಬೆಳಿಗ್ಗೆ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ವೈವಿಧ್ಯಮಯವಾಗಿ ನಡೆಯಿತು. ಬಂಟರ ಸಂಘ ಮುಂಬಯಿಯ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಉನ್ನತ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷ ಆದರ್ಶ್ ಬಿ ಶೆಟ್ಟಿ ಮತ್ತು ಇಂಡಿಯನ್ ಹೋಟೆಲ್ ಆಂಡ್ ರೆಸ್ಟೋರೆಂಟ್ಸ್ ಅಸೋಸಿಯೇಷನ್ (ಆಹಾರ್) ನ ಅಧ್ಯಕ್ಷ ವಿಜಯ ಕೆ ಶೆಟ್ಟಿ ಅವರು ನಮ್ಮ ಹೆಮ್ಮೆಯ ದೇಶದ ತಿರಂಗವನ್ನು ಅರಳಿಸಿ, ಧ್ವಜಾರೋಹಣಗೈದು ಧ್ವಜವಂದನೆ ಮಾಡಿದರು. ಉನ್ನತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಪಥಸಂಚಲನ ಮತ್ತು ತಿರಂಗ ವಂದನೆ ನಡೆಯಿತು. ತದನಂತರ ಬಂಟರ ಭವನದ ಮುಕ್ತಾನಂದ ಸಭಾಗೃಹದಲ್ಲಿ ಕುರ್ಲಾ ಭಾಂಡೂಪ್ ಪ್ರಾದೇಶಿಕ ಸಮಿತಿಯ ಆಯೋಜನೆಯಲ್ಲಿ ವೈದ್ಯಕೀಯ ಶಿಬಿರ ಮತ್ತು ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಮತ್ತು ಪದಾಧಿಕಾರಿಗಳು ಉದ್ಘಾಟಿಸಿದರು. ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಗೃಹದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಂದ ವಿಶೇಷ ಕಾರ್ಯಕ್ರಮ ನಡೆಯಿತು. ವೇದಿಕೆಯ ಗಣ್ಯರು ಸ್ವಾತಂತ್ರ್ಯ ದಿನಾಚರಣೆ ವಿಷಯದಲ್ಲಿ ಸಂದರ್ಭೋಚಿತವಾಗಿ ಮಾತನಾಡಿದರು. ಕಾಲೇಜಿನ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.




ಈ ಸಂದರ್ಭ ಬಂಟರ ಸಂಘದ ಉಪಾಧ್ಯಕ್ಷ ಮಹೇಶ್ ಎಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್.ಕೆ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ರಮೇಶ್ ಬಿ ಶೆಟ್ಟಿ ಇನ್ನ ಬಗ್ಗರಗುತ್ತು, ಉನ್ನತ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರುಗಳಾದ ಸಿಎ ವಿಶ್ವನಾಥ್ ಶೆಟ್ಟಿ ಮತ್ತು ಸಿಎ ಪ್ರದೀಪ್ ಶೆಟ್ಟಿ, ಕಾರ್ಯದರ್ಶಿ ಸಾಗರ್ ಡಿ ಶೆಟ್ಟಿ, ಕೋಶಾಧಿಕಾರಿ ಸಿಎ ರೋಹಿತ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಆರ್ ಶೆಟ್ಟಿ, ಆಶಾ ಸುಧೀರ್ ಶೆಟ್ಟಿ, ವನಿತಾ ನೋಂಡ, ಶಶಿಕಾಂತಿ ಆರ್ ಶೆಟ್ಟಿ, ಯಶೋಧ ಎಸ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸವಿನ್ ಜೆ ಶೆಟ್ಟಿ, ಬಂಟರ ಸಂಘದ ಪದಾಧಿಕಾರಿಗಳಾದ ಕೃಷ್ಣ ವಿ ಶೆಟ್ಟಿ, ಹರೀಶ್ ಶೆಟ್ಟಿ, ಪ್ರಕಾಶ್ ಟಿ ಶೆಟ್ಟಿ ನಲ್ಯಗುತ್ತು, ಪಿ ಧನಂಜಯ ಶೆಟ್ಟಿ, ಗಿರೀಶ್ ಶೆಟ್ಟಿ, ಭಾಸ್ಕರ್ ಶೆಟ್ಟಿ ಕಾರ್ನಾಡ್, ಅಡ್ವಕೇಟ್ ಆರ್.ಜಿ ಶೆಟ್ಟಿ, ದಿವಾಕರ್ ಶೆಟ್ಟಿ ಕುರ್ಲಾ, ಭಾಸ್ಕರ್ ಡಿ ಶೆಟ್ಟಿ, ಸೀತಾರಾಮ್ ಶೆಟ್ಟಿ, ಸಂತೋಷ್ ಶೆಟ್ಟಿ, ಕಾಲೇಜಿನ ಪ್ರಿನ್ಸಿಪಾಲರುಗಳಾದ ಡಾ| ಹಿರೇನ್ ದಂಡ್, ಪ್ರಕಾಶ್ ಮೋರೆ, ರಾಜೇಂದ್ರ ಪಾಟೀಲ್, ಯೋಗೇಶ್ ಉತ್ತರೇಕರ್, ಶೈಲಾ ಶೆಟ್ಟಿ ಮತ್ತು ಬಂಟರ ಸಂಘದ ಮುಖ್ಯ ಪ್ರಬಂಧಕ ಪ್ರವೀಣ್ ಶೆಟ್ಟಿ ವರಂಗ ಮೊದಲಾದವರು ಉಪಸ್ಥಿತರಿದ್ದರು.
ಚಿತ್ರ, ವರದಿ : ಗುರುದತ್ ಪೂಂಜ ಮುಂಡ್ಕೂರು














































































































