ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಗಣಕ ವಿಜ್ಞಾನ ವಿಭಾಗಗಳ ಜಂಟಿ ಆಶ್ರಯದಲ್ಲಿ ಮಣಿಪಾಲದ MSDC ಸಹಯೋಗದಲ್ಲಿ ಡೇಟಾ ಸೈನ್ಸ್ ವಿದ್ಯಾರ್ಥಿಗಳಿಗಾಗಿ ಓರಿಯಂಟೇಶನ್ ಕಾರ್ಯಕ್ರಮವನ್ನು ಆಗಸ್ಟ್ 13ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ
ಆಯೋಜಿಸಲಾಯಿತು. ಮಣಿಪಾಲದ ಸ್ಕೂಲ್ ಆಫ್ ಐಟಿ ಸ್ಕಿಲ್ಸ್ ನ ಸ್ಕಿಲ್ ಟ್ರೈನರ್ಗಳಾದ ಪುನೀತ್ ಆಚಾರ್ಯ ಹಾಗೂ ಅನನ್ಯ ಹೆಗ್ಡೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಡೇಟಾ ಸೈನ್ಸ್ ಕ್ಷೇತ್ರದ ಅವಕಾಶಗಳು, ಅಗತ್ಯ ಕೌಶಲ್ಯಗಳು ಹಾಗೂ ವಿದ್ಯಾರ್ಥಿಗಳ ವೃತ್ತಿ ಬೆಳವಣಿಗೆಗೆ ಸಂಬಂಧಿಸಿದಂತೆ ಮಾರ್ಗದರ್ಶನ ನೀಡಿದರು. ಬದಲಾಗುತ್ತಿರುವ ತಂತ್ರಜ್ಞಾನ ಕ್ಷೇತ್ರದಲ್ಲಿ ಡೇಟಾ ವಿಶ್ಲೇಷಣೆ, ಕೃತಕ ಬುದ್ಧಿಮತ್ತೆ ಹಾಗೂ ಸಂಬಂಧಿತ ಕೌಶಲ್ಯಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು. ಡೇಟಾ
ಸೈನ್ಸ್ ಅನ್ನು ವೃತ್ತಿ ಕ್ಷೇತ್ರವಾಗಿ ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.




ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವೀಣಾ ವಿ. ಭಟ್ ಹಾಗೂ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್, ಕಾರ್ಯಕ್ರಮ ಸಂಯೋಜಕರಾದ ಸುಧೀರ್ ಕುಮಾರ್ ಹಾಗೂ ಶ್ರೀಮತಿ ವಿಲ್ಮಾ ಶೆರಲ್ ಕಾರ್ನೆಲಿಯೊ, ಬೋಧಕ ಸಿಬ್ಬಂದಿಗಳು ಹಾಗೂ ಡೇಟಾ ಸೈನ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಮಹಿಮಾ ಕಾರ್ಯಕ್ರಮ ನಿರೂಪಿಸಿದರು.















































































































