
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಯುವ ಬಂಟರ ಸಂಘ ಮೂಡುಬಿದಿರೆಯ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಬೆಳುವಾಯಿ ಅವರನ್ನು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಮಹಾದಾನಿ ಶಶಿಧರ ಶೆಟ್ಟಿ ಬರೋಡ, ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿ ಮುನಿಯಾಲು, ಒಕ್ಕೂಟದ ಮಹಾ ನಿರ್ದೇಶಕ ಶಶಿಧರ ಶೆಟ್ಟಿ ಇನ್ನಂಜೆ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಅಧ್ಯಕ್ಷ ರಾಜೇಂದ್ರ ವಿ ಶೆಟ್ಟಿ, ಯುವ ಘಟಕದ ಅಧ್ಯಕ್ಷ ಗಿರೀಶ್ ಶೆಟ್ಟಿ ತೆಳ್ಳಾರು, ಸಂಚಾಲಕ ಕೊಲ್ಲಾಡಿ ಬಾಲಕೃಷ್ಣ ರೈ, ಪಡುಬಿದ್ರೆ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ ಶೆಟ್ಟಿ, ಯುವ ಬಂಟರ ಸಂಘ ಮೂಡುಬಿದಿರೆಯ ಉಪಾಧ್ಯಕ್ಷ ಸಂದೀಪ್ ಎಂ ಶೆಟ್ಟಿ, ಕೋಶಾಧಿಕಾರಿ ಭರತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಶೆಟ್ಟಿ ಮಿಜಾರು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


















































































































