ಮಹಾನಗರದ ಪ್ರತಿಷ್ಠಿತ ಸಮಾಜ ಸೇವಾ ಸಂಸ್ಥೆ ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ಸೆಪ್ಟೆಂಬರ್ 1 ರಂದು ಮಂಗಳವಾರ ಅಪರಾಹ್ನ ಗಂಟೆ 2 ರಿಂದ ಕುರ್ಲಾ ಪೂರ್ವ ಬಂಟರ ಭವನದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಗೃಹದ ಶ್ರೀಮತಿ ಅಪ್ಪಿ ಕೃಷ್ಣ ಶೆಟ್ಟಿ ವೇದಿಕೆಯಲ್ಲಿ ಹಳದಿ ಕುಂಕುಮ ಮತ್ತು ಸೋಣದ ಸೊಬಗು, ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿಯವರ ನಿರ್ದೇಶನದಲ್ಲಿ ‘ಸಪ್ತ ದುರ್ಗೆ ಮಹಾತ್ಮೆ’ ಎಂಬ ತುಳು ಯಕ್ಷಗಾನ ಸಾದರಗೊಳ್ಳಲಿದೆ. ಇದಲ್ಲದೇ ಬಂಟರ ಸಂಘದ ಮಹಿಳಾ ವಿಭಾಗದಿಂದ ವಿಶೇಷ ಭಜನೆ ಜರಗಲಿದೆ. ಕಾರ್ಯಕ್ರಮವು ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅವರ ಮಾರ್ಗದರ್ಶನದೊಂದಿಗೆ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಆರ್ ಶೆಟ್ಟಿ ಅವರ ನೇತೃತ್ವ ಮತ್ತು ಪದಾಧಿಕಾರಿಗಳ ಮುಂದಾಳತ್ವದಲ್ಲಿ ಮುಖ್ಯ ಪ್ರಾಯೋಜಕರಾದ ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಇದರ ಸಿಎಂಡಿ ಡಾ| ಆರ್.ಕೆ ಶೆಟ್ಟಿ (ಸಂಜೀವಿನಿ) ಅವರ ಪ್ರಾಯೋಜಕತ್ವದಲ್ಲಿ ಜರಗಲಿದೆ.




ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ.ಅವರು ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಬಂಟರ ಸಂಘ ಮುಂಬಯಿಯ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ್ ಹೆಗ್ದೆ ಅವರು ಆಗಮಿಸಲಿರುವರು. ಗೌರವ ಅತಿಥಿಗಳಾಗಿ ಬಂಟರ ಸಂಘದ ಮಾಜಿ ಜೊತೆ ಕೋಶಾಧಿಕಾರಿ ರತ್ನಾ ಪ್ರಭಾಕರ್ ಶೆಟ್ಟಿ ಮತ್ತು ಆಲ್ಟಾ ಹೋಟೆಲ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸೆಂಟ್ರಲ್ ಕ್ಯಾಟರ್ಸ್ ಪ್ರೈವೇಟ್ ಲಿಮಿಟೆಡ್ ಇದರ ನಿರ್ದೇಶಕಿ ಪ್ರೇಮ ಸುಧಾಕರ್ ಶೆಟ್ಟಿ ಉಪಸ್ಥಿತರಿರುವರು. ಇದೇ ಸಂದರ್ಭ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ ಮತ್ತು ಬಂಟರ ಸಂಘದ ಸೀನಿಯರ್ ಸಿಟಿಜನ್ ವೆಲ್ಫೇರ್ ಕಮಿಟಿಯ ಛೇರ್ಮನ್ ಕೃಷ್ಣ ವಿ ಶೆಟ್ಟಿ ಮತ್ತು ಪಿ.ಬಿ ಶೆಟ್ಟಿ ಆಂಡ್ ಕಂಪನಿ ಚಾರ್ಟರ್ಡ್ ಅಕೌಂಟೆಂಟ್ ಇದರ ಸಿಎ ಪ್ರಭಾಕರ್ ಶೆಟ್ಟಿ ಮತ್ತು ಯಕ್ಷ ಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಮೊದಲಾದವರನ್ನು ವೇದಿಕೆಯ ಗಣ್ಯರು ಸನ್ಮಾನಿಸಲಿದ್ದಾರೆ.


ಕಾರ್ಯಕ್ರಮಕ್ಕೆ ಸಮಾಜ ಬಾಂಧವರೆಲ್ಲರೂ ಆಗಮಿಸಬೇಕೆಂದು ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಉಪಾಧ್ಯಕ್ಷ ಮಹೇಶ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್.ಕೆ ಶೆಟ್ಟಿ, ಗೌರವ ಕೋಶಾಧಿಕಾರಿ ಸಿ.ಎ ರಮೇಶ್ ಶೆಟ್ಟಿ ಇನ್ನ ಬಗ್ಗರ ಗುತ್ತು, ಜತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್, ಜೊತೆ ಕೋಶಾಧಿಕಾರಿ ಶಶಿಧರ್ ಶೆಟ್ಟಿ ಇನ್ನಂಜೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಸವಿನ್ ಜೆ ಶೆಟ್ಟಿ ಮತ್ತು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಆರ್ ಶೆಟ್ಟಿ ಉಪಾಧ್ಯಕ್ಷೆ ಕವಿತಾ ಐ.ಆರ್ ಶೆಟ್ಟಿ, ಕಾರ್ಯದರ್ಶಿ ಆಶಾ ಸುಧೀರ್ ಶೆಟ್ಟಿ, ಕೋಶಾಧಿಕಾರಿ ಸುಚಿತಾ ಕೆ ಶೆಟ್ಟಿ, ಜೊತೆ ಕಾರ್ಯದರ್ಶಿ ವನಿತಾ ನೋಂಡ, ಜೊತೆ ಕೋಶಾಧಿಕಾರಿ ಸರೋಜಾ ಬಿ ಶೆಟ್ಟಿ, ಮತ್ತು ಸರ್ವ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.















































































































