ಸುರತ್ಕಲ್ ಬಂಟರ ಸಂಘದ ಕ್ರೀಡೊತ್ಸವ
ಸುರತ್ಕಲ್ : ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಸಂಸ್ಥೆ ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮೈದಾನದಲ್ಲಿ ಬಂಟರ ಕ್ರೀಡೋತ್ಸವ ನಡೆಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಪಥಸಂಚಲನದಲ್ಲಿ ಭಾಗವಹಿಸಿ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಸಮಾಜ ಸೇವೆಯ ಜೊತೆಗೆ ಕ್ರೀಡೆಗೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಕ್ರೀಡಾಳುಗಳಿಗೆ ಒಕ್ಕೂಟ ನಿರಂತರ ಸಹಾಯ ಮಾಡುತ್ತಿದೆ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ ವಹಿಸಿದ್ದರು. ಸುರತ್ಕಲ್ ಬಂಟರ ಸಂಘ ನಿರಂತರ ಕಾರ್ಯಚಟುವಟಿಕೆಯಲ್ಲಿ ತೊಡಗಿದ್ದು, ಇದಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮತ್ತು ಬಂಟರ ಮಾತೃಸಂಘ ಪ್ರೋತ್ಸಾಹ ನೀಡುತ್ತಿದೆ. ಕೃಷಿ, ವೈದ್ಯಕೀಯ, ಕ್ರೀಡೆ, ಶಿಕ್ಷಣ, ಸಾಂಸ್ಕೃತಿಕ, ಸಮಾಜಸೇವೆ ಹೀಗೆ ಪ್ರತೀ ವಿಭಾಗದಲ್ಲೂ ಮಹಿಳೆಯರ ಮತ್ತು ಯುವ ಸಮುದಾಯದ ಬೆಂಬಲ ಪಡೆದು ಸಂಘ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮೇಯರ್ ಪ್ರೇಮಾನಂದ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಬಂಟರ ಮಾತೃ ಸಂಘದ ಕೋಶಾಧಿಕಾರಿ ಕೃಷ್ಣಪ್ರಸಾದ್ ರೈ, ಒಕ್ಕೂಟದ ಜೊತೆ ಕಾರ್ಯದರ್ಶಿ ಸತೀಶ ಅಡಪ ಸಂಕಬೈಲ್, ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು ಭಾಗವಹಿಸಿದ್ದರು.
ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ, ಸಂಘದ ಉಪಾಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿ ಪ್ರವೀಣ ಶೆಟ್ಟಿ ಸುರತ್ಕಲ್, ಕೋಶಾಧಿಕಾರಿ ರತ್ನಾಕರ ಶೆಟ್ಟಿ ಸುರತ್ಕಲ್, ಜೊತೆ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಸಂಘಟನಾ ಕಾರ್ಯದರ್ಶಿ ದೇವೇಂದ್ರ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಬಾಳ, ಕ್ರೀಡಾ ಕಾರ್ಯದರ್ಶಿ ಹರೀಶ್ ಶೆಟ್ಟಿ ಕಾಟಿಪಳ್ಳ, ಮಹಿಳಾ ವೇದಿಕೆಯ ಅಧ್ಯೆಕ್ಷೆ ಚಿತ್ರಾ ಜೆ ಶೆಟ್ಟಿ, ಮಹಿಳಾ ಕ್ರೀಡಾ ಕಾರ್ಯದರ್ಶಿ ಅಕ್ಷತಾ ಜಿ ಶೆಟ್ಟಿ ಉಪಸ್ಥಿತರಿದ್ದರು. ಅನೂಪ್ ಶೆಟ್ಟಿ ಪ್ರಾರ್ಥನೆಗೈದರು. ಲೋಕಯ್ಯ ಶೆಟ್ಟಿ ಸ್ವಾಗತಿಸಿದರು. ಪ್ರವೀಣ್ ಶೆಟ್ಟಿ ವಂದಿಸಿದರು. ರಾಜೇಶ್ವರಿ ಡಿ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ಸಮಾರಂಭದಲ್ಲಿ ಐಕಳ ಹರೀಶ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ರೋಹಿತ್ ಕುಮಾರ್ ಕಟೀಲು ಅವರನ್ನು ಸನ್ಮಾನಿಸಲಾಯಿತು. ಅದೇ ರೀತಿ ಸಂಘದ ವ್ಯಾಪ್ತಿಯ ಹತ್ತು ಮಂದಿ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು.