ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಪಠ್ಯಜ್ಞಾನದ ಜೊತೆಗೆ ಪ್ರಾಯೋಗಿಕ ಕೌಶಲ್ಯ ಹಾಗೂ ಪ್ರಾಜೆಕ್ಟ್ ಅಭಿವೃದ್ಧಿಯ ಅನುಭವವನ್ನು ಹೊಂದುವುದು ಅಗತ್ಯ ಎಂದು ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಎರೋಲ್ ಅಲ್ಮೇಡಾ ಹಾಗೂ ಚೇತನ್ ಹೇಳಿದರು. ಅವರು ಕುಂದಾಪುರ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಹಾಗೂ ಪ್ರಾಕ್ತನ ವಿದ್ಯಾರ್ಥಿ ಸಂಘದ ವತಿಯಿಂದ ಅಂತಿಮ ವರ್ಷದ ಬಿಸಿಎ, ಎ.ಐ ಮತ್ತು ಎಂ.ಎಲ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಪ್ರಾಜೆಕ್ಟ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.
ಪ್ರಾಜೆಕ್ಟ್ ಆಯ್ಕೆ, ಯೋಜನೆ ರೂಪಿಸುವಿಕೆ, ಅಭಿವೃದ್ಧಿ ಹಾಗೂ ಪ್ರಾಯೋಗಿಕ ಅನುಷ್ಠಾನದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್, ಕಾಯಕ್ರಮ ಸಂಯೋಜಕರಾದ ಪ್ರಣಮ್ ಆರ್, ಮೇಘಾ, ವಿಭಾಗದ ಪ್ರಾಧ್ಯಾಪಕರು, ಕಂಪ್ಯೂಟರ್ ಪ್ರೋಗ್ರಾಮರ್ಸ್, ಹಾಗೂ ಪ್ರಾಕ್ತನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ದೀಪಾ ಪೂಜಾರಿ ಹಾಗೂ ಖಜಾಂಚಿ ಸಚಿನ್ ದೇವಾಡಿಗ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಮನೀಷಾ ಸ್ವಾಗತಿಸಿ, ವಿದ್ಯಾರ್ಥಿನಿ ನೀರಿಕ್ಷಾ ಕಾರ್ಯಕ್ರಮ ನಿರೂಪಿಸಿದರು.


















































































































