ಬ್ರಹ್ಮಾವರದ ಜಿ.ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ತಂದೆ ತಾಯಿಯರು ನಮ್ಮ ಮೊದಲ ಗುರುಗಳಾಗಿದ್ದು ಅವರ ಆಶೀರ್ವಾದದೊಂದಿಗೆ ಅವರ ಮಾತನ್ನು ಪಾಲಿಸಬೇಕು. ಅದೇ ರೀತಿ ಶಿಕ್ಷಕರು ಮಕ್ಕಳ ಭವಿಷ್ಯಕ್ಕೆ ಬೆಳಕನ್ನು ತೋರುವವರು. ಅವರನ್ನು ಸದಾ ಗೌರವಿಸಿ ಸ್ಮರಿಸಬೇಕೆಂದು ಕೋರಿ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ತಿಳಿಸಿದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ, ಶಿಕ್ಷಕರು ಮಕ್ಕಳಲ್ಲಿರುವ ಕೌಶಲ್ಯಗಳನ್ನು ಗುರುತಿಸಿ ಅದನ್ನು ಉತ್ತೇಜಿಸಿ ಸಮಾಜಕ್ಕೆ ಅತ್ಯುತ್ತಮ ಪ್ರಜೆಯನ್ನು ನೀಡುತ್ತಾನೆ. ಒಬ್ಬ ಶಿಕ್ಷಕನಾಗಿ ನನಗೆ ಹೆಮ್ಮೆಯಾಗುತ್ತಿದೆ ಎಂದರು.




ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಡಾ. ಅನುಷಾ ಸುಬ್ರಹ್ಮಣ್ಯಂರವರು ಶಿಕ್ಷಕರ ದಿನಾಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಸಂಸ್ಥೆಯ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಕುರಿತು ಭಾಷಣ, ಸಂಗೀತ ಮತ್ತು ನೃತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಶ್ರೀಮಾ ಪ್ರಣವ್ ಶೆಟ್ಟಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.












































































































