ಗಣೇಶೋತ್ಸವದ ಮೂಲ ಉದ್ದೇಶ ಸಂಘಟನೆ, ಐಕ್ಯತೆಯನ್ನು ಸಾರುವುದು. ಗಣಪನಿಗೆ ಮೊದಲ ಪೂಜೆ, ಬಂಟ್ಸ್ ಹಾಸ್ಟೇಲ್ ನ ಸಿದ್ದಿವಿನಾಯಕ ಪ್ರತಿಷ್ಠಾನದಲ್ಲಿ ನಡೆಯುವ ಗಣೇಶೋತ್ಸವ ಶಿಸ್ತು ಬದ್ದತೆಯಿಂದ ಕೂಡಿದೆ ಎಂದು ಉದ್ಯಮಿ ಶಶಿಧರ ಶೆಟ್ಟಿ ಬರೋಡ ಅವರು ಹೇಳಿದರು. ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ನಲ್ಲಿ ನಡೆಯುತ್ತಿರುವ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಥಮ ದಿನದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಬಂಟ ಸಮುದಾಯದವರು ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಅನನ್ಯ ಸಾಧನೆ ಮಾಡಿದ್ದು, ಚಲನಚಿತ್ರ ರಂಗದಲ್ಲಂತೂ ಇವರು ಅಪೂರ್ವ ಕೊಡುಗೆ ನೀಡಿದ್ದಾರೆ. ಬಂಟರು ನಾಯಕತ್ವ ಗುಣ ಉಳ್ಳವರು, ಎದೆಗಾರಿಕೆ ಉಳ್ಳವರು, ನಾಯಕತ್ವದಲ್ಲಿ ಗೆದ್ದವರು, ಬಂಟರು ಇತರ ಸಮಾಜದವರನ್ನು ಪ್ರೀತಿ ಮಾಡಿದವರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಹೇಳಿದರು. ಅದ್ವೈತ್ ಜೆಸಿಬಿ ಸಂಸ್ಥೆಯ ಸಿಇಒ ರಂಜಿತ್ ರೈ ಅವರು ಮಾತನಾಡಿ, ಇಲ್ಲಿ ನಡೆಯುವ ಗಣೇಶೋತ್ಸವ ಮಾದರಿಯಾಗಿದೆ ಎಂದರು. ಈ ಸಂದರ್ಭದಲ್ಲಿ ಮೂಡದ ನೂತನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಪರಿಸರ ಹಾಗೂ ಪವಾಸೋದ್ಯಮ ನಿಗಮದ ಅಧ್ಯಕ್ಷೆ ಶಾರ್ಲೆಟ್ ಪಿಂಟೋ ಅವರನ್ನು ಅಭಿನಂದಿಸಲಾಯಿತು.





ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಖ್ಯಾತ ವೈದ್ಯ ಡಾ. ಡಿ ಸುರೇಶ್ ರಾವ್, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಬೇಲಾಡಿ ವಿಠಲ ಶೆಟ್ಟಿ, ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಜಗದೀಶ್ ಶೆಟ್ಟಿ ಮೀಂಜ, ಖ್ಯಾತ ಕುಸ್ತಿ ಪಟು ಶೌರ್ಯ ಶೆಟ್ಟಿ, ಮಾಡೆಲ್ ಬ್ರಿನಾಳ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಯು.ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಬಂಟರ ಮಾತೃ ಸಂಘದ ಕಾರ್ಯದರ್ಶಿಎಂ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ, ಟ್ರಸ್ಟಿ ರವಿರಾಜ ಶೆಟ್ಟಿ ನಿಟ್ಟೆಗುತ್ತು, ಕೃಷ್ಣಪ್ರಸಾದ್ ರೈ, ಡಾ. ಆಶಾಜ್ಯೋತಿ ರೈ, ವಿವಿಧ ಬಂಟರ ಸಂಘಗಳ ಅಧ್ಯಕ್ಷರಾದ ರವೀಂದ್ರ ರೈ ಕಲ್ಲಿಮಾರು, ತಿಮ್ಮಯ್ಯ ಶೆಟ್ಟಿ, ವಸಂತ ಶೆಟ್ಟಿ, ಆನಂದ ಶೆಟ್ಟಿ, ರಾಮಚಂದ್ರ ಕಾವ, ಮಿಥುನ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಪ್ರಸ್ತಾವಿಸಿ, ಸ್ವಾಗತಿಸಿದರು. ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್ ಹಾಗೂ ಡಾ. ಕವಿತಾ ಪಕ್ಕಳ ಕಾರ್ಯಕ್ರಮ ನಿರೂಪಿಸಿದರು.












































































































