
ಕುಂದಾಪುರ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಮತ್ತು ಟ್ರೈನಿಂಗ್ ವಿಭಾಗದ ಆಶ್ರಯದಲ್ಲಿ ಸೆಪ್ಟೆಂಬರ್ 17 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿ ಕಂಪನಿ ಎಕ್ಸ್ಪೆನೋ ಪ್ರೈವೇಟ್ ಲಿಮಿಟೆಡ್ ನ ವಲಯ ವ್ಯವಸ್ಥಾಪಕರಾದ ಅರ್ಚನಾ ಜಯರಾಜ್ ಅವರು ವಿದ್ಯಾರ್ಥಿಗಳಿಗೆ ವೃತ್ತಿ ಜೀವನದ ಕುರಿತು ಅರಿವು ಮೂಡಿಸುವುದರ ಜೊತೆಗೆ ಉದ್ಯೋಗ ಕ್ಷೇತ್ರದ ಅಗತ್ಯತೆಗಳನ್ನು ಪರಿಚಯಿಸಿದರು. ಈ ಸಂದರ್ಭ ಕಾಲೇಜಿನ ಉಪ ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ, ಪ್ರಾಕ್ತನ ವಿದ್ಯಾರ್ಥಿನಿ ಹಿತಾ ಶೆಟ್ಟಿ, ವೃತ್ತಿ ಮಾರ್ಗದರ್ಶನ ತರಬೇತಿ ಘಟಕದ ಮುಖ್ಯಾಧಿಕಾರಿ ಗಿರಿರಾಜ್ ಭಟ್ ನೆoಪು, ವೃತ್ತಿ ಮಾರ್ಗದರ್ಶನ ಘಟಕದ ಸಂಯೋಜಕ ತಿಮ್ಮಪ್ಪ ಡಿ.ಎಸ್ ಹಾಗೂ ಮಹೇಶ್ ಕುಮಾರ್ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಸುಧೀರ್ ಕುಮಾರ್ ಸ್ವಾಗತಿಸಿ, ರವಿನಂದನ್ ಭಟ್ ಎಸ್. ಟಿ ಕಾರ್ಯಕ್ರಮ ನಿರೂಪಿಸಿದರು.















































































































