
ಬಂಟರ ಸಂಘ ಪುತ್ತೂರು ತಾಲೂಕು ಇದರ ಸಾರಥ್ಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದಲ್ಲಿ ಅಕ್ಟೋಬರ್ 3 ರಂದು ಪುತ್ತೂರು ಎಂ. ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿರುವ ಬಂಟೆರೆ ಸೇರಿಗೆ -2026, ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರಧಾನ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ಸೆಪ್ಟೆಂಬರ್ 19 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆಯ ಬಳಿಕ ಪುತ್ತೂರು ಎಂ ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು. ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಸಾಜ, ಉಪಾಧ್ಯಕ್ಷ ಪ್ರತಾಪ್ ಚಂದ್ರ ರೈ ಕುದ್ಮಾರುಗುತ್ತು, ಜೊತೆ ಕಾರ್ಯದರ್ಶಿಗಳಾದ ಹರಿಣಾಕ್ಷಿ ಜೆ. ಶೆಟ್ಟಿ, ಸ್ವರ್ಣಲತಾ ಜೆ. ರೈ, ನಿರ್ದೇಶಕರಾದ ಪ್ರಕಾಶ್ ರೈ ಸಾರಕರೆ, ಶಶಿಕಿರಣ್ ರೈ ನೂಜಿಬೈಲು, ಸುಧೀರ್ ಶೆಟ್ಟಿ ತೆಂಕಿಲ, ನಿತಿನ್ ಪಕ್ಕಳ ಮರೀಲ್, ಇಂದುಶೇಖರ್ ಶೆಟ್ಟಿ, ರವಿಪ್ರಸಾದ್ ಶೆಟ್ಟಿ ಬನ್ನೂರು, ಶಶಿರಾಜ್ ರೈ ನೆಕ್ಕಿಲಾಡಿ, ಉದ್ಯಮಿ ಶಿವರಾಮ ಆಳ್ವ ಬಳ್ಳಮಜಲುಗುತ್ತು, ತಾಲೂಕು ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ ನರಿಮೊಗರು, ಕಾರ್ಯದರ್ಶಿ ಕುಸುಮಾ ಪಿ. ಶೆಟ್ಟಿ ಕೆರೆಕ್ಕೋಡಿ, ಬಂಟರ ಯಾನೆ ನಾಡವರ ಮಾತೃ ಸಂಘದ ನಿರ್ದೇಶಕಿ ವತ್ಸಲಾ ಪಿ. ಶೆಟ್ಟಿ, ನಯನಾ ರೈ ನೆಲ್ಲಿಕಟ್ಟೆ, ವಿದ್ಯಾರ್ಥಿ ಬಂಟರ ವಿಭಾಗದ ಅಧ್ಯಕ್ಷ ಪವನ್ ಶೆಟ್ಟಿ ಕಂಬಳತಡ್ಡ, ಪುತ್ತೂರು ಬಂಟರ ಭವನದ ವ್ಯವಸ್ಥಾಪಕ ರವಿಚಂದ್ರ ರೈ ಕುಂಬ್ರ, ಭಾಸ್ಕರ್ ರೈ ಎಂ.ರವರು ಉಪಸ್ಥಿತರಿದ್ದರು.

















































































































