
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಇದರ ಕಾರ್ಯ ಚಟುವಟಿಕೆಗಳ ಕುರಿತಾದ ವಾರ್ತಾ ಸಂಚಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಉಡುಪಿಯಲ್ಲಿ ಬಿಡುಗಡೆಗೊಳಿಸಿದರು. ಡಾ. ಶಿವರಾಮ ಕಾರಂತ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಗಣನಾಥ ಶೆಟ್ಟಿ ಎಕ್ಕಾರು, ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಮತ್ತು ಸದಸ್ಯರಾದ ಜಿ.ಎಂ.ಶರೀಫ್ ಹೂಡೆ ಉಪಸ್ಥಿತರಿದ್ದರು. ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ ಈ ಸಂದರ್ಭದಲ್ಲಿ ಹಾಜರಿದ್ದರು.

















































































































