ಕುಂದಾಪುರ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ ರೋಟರಿ ಕ್ಲಬ್ ಕುಂದಾಪುರ ಮತ್ತು ಪಾರ್ವತಿ ಶೆಟ್ಟಿ ಮತ್ತು ಆನಗಳ್ಳಿ ಮಹಾಲಿಂಗ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ ಉಮೇಶ್ ಶೆಟ್ಟಿ, ಪಾರ್ವತಿ ಮತ್ತು ಆನಗಳ್ಳಿ ಮಹಾಲಿಂಗ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ವಿಶ್ವನಾಥ್ ಶೆಟ್ಟಿ, ಕುಂದಾಪುರದ ಖ್ಯಾತ ವಕೀಲ ಟಿ.ಬಿ ಶೆಟ್ಟಿ, ರೋಟರಿ ಕ್ಲಬ್ ಕುಂದಾಪುರದ ಉಪಾಧ್ಯಕ್ಷ ಮನೋಜ್ ನಾಯರ್, ಕಾರ್ಯದರ್ಶಿ ಅಶೋಕ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ವೆಂಕಟೇಶ್ ನಾವುಂದ, ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಮುತ್ತಯ್ಯ ಶೆಟ್ಟಿ, ಉಪ ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಮತ್ತಿತರರು ಉಪಸ್ಥಿತರಿದ್ದರು.


















































































































