ಗಣಿತವು ಪ್ರತಿಯೊಬ್ಬರ ಬದುಕಿನಲ್ಲಿ ಅತ್ಯವಶ್ಯಕವಾದ ವಿಷಯ. ಗಣಿತದ ಕೌಶಲ್ಯವು ನಮ್ಮನ್ನು ಸೃಜನಶೀಲ ಹಾಗೂ ಬುದ್ಧಿವಂತ ವ್ಯಕ್ತಿಯನ್ನಾಗಿ ಮಾಡುತ್ತದೆ ಎಂದು ಕುಂದಾಪುರದ ಕ್ಯಾಲೆಂಡರ್ ತಜ್ಞರಾದ ಎಮ್ ಲಕ್ಷ್ಮಣ ಶೆಟ್ಟಿ ಮಂಡಾಡಿಯವರು ಹೇಳಿದರು. ಅವರು ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ, ನಿರ್ವಹಣೆ ಹಾಗೂ ಮಾಹಿತಿ ತಂತ್ರಜ್ಞಾನ ಸಂಘವು ಸೆಪ್ಟೆಂಬರ್ 25 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಿದ ಪವರ್ ಆಫ್ ಮ್ಯಾಥಮ್ಯಾಟಿಕ್ಸ್ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಗಣಿತದ ಕೌಶಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.




ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ ಉಮೇಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ವಾಣಿಜ್ಯ, ನಿರ್ವಹಣೆ ಹಾಗೂ ಮಾಹಿತಿ ತಂತ್ರಜ್ಞಾನ ಸಂಘದ ಸಂಯೋಜಕಿ ಶ್ರೀಮತಿ ಪ್ರೀತಿ ಹೆಗ್ಡೆ, ರಜತ್ ಬಂಗೇರ ಹಾಗೂ ಶ್ರೀಮತಿ ವಿಜಯಶ್ರೀ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ತಸ್ವಿ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ಆಯಶಾ ಮುಸ್ಕಾನ್ ಕಾರ್ಯಕ್ರಮ ನಿರೂಪಿಸಿದರು.















































































































