ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (ಎಫ್ಎಸಿಸಿಐ)ಯ ನಿರ್ದೇಶಕರಾಗಿ ಅಂಡಾರು ದೇವಿಪ್ರಸಾದ್ ಶೆಟ್ಟಿ ಆಯ್ಕೆಯಾಗಿದ್ದಾರೆ. ದೇವಿಪ್ರಸಾದ್ ಶೆಟ್ಟಿಯವರು ಬೆಂಗಳೂರಿನಲ್ಲಿ ನಡೆದ 2026 -27ನೇ ಸಾಲಿನ ಸಂಸ್ಥೆಯ ಕಾರ್ಯಕಾರಿ ಚುನಾವಣೆಯಲ್ಲಿ ಜಯ ಸಾಧಿಸಿದ್ದಾರೆ. ಈ ಹಿಂದೆಯೂ ಎರಡು ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಉಡುಪಿ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಯುಸಿಸಿಐ) ಯ ಅಧ್ಯಕ್ಷರು, ಕಾರ್ಯದರ್ಶಿಗಳು ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು ಹಾಗೂ ಎಲ್ಲಾ ಸದಸ್ಯರ ಸಹಕಾರದಿಂದ ಗೆಲುವು ಲಭಿಸಿದೆ. ಕರ್ನಾಟಕ ವಾಣಿಜ್ಯೋದ್ಯಮ, ಕೈಗಾರಿಕೆ ಮತ್ತು ವ್ಯಾಪಾರ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.


















































































































