ಕುಂದಾಪುರ ಡಾ ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 02 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿಯವರು ಮಾತನಾಡಿ, ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜೀವನ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದರು.
ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ, ಪೂಜಾ ಕುಂದರ್, ರೋವರ್ ಸ್ಕೌಟ್ ಲೀಡರ್ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ರೇಂಜರ್ ಲೀಡರ್ ಶ್ರೀಮತಿ ರೇವತಿ ಡಿ. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದ್ವಿತೀಯ ಬಿ.ಬಿ.ಎ ಪ್ರತೀಕ್ಷಾ, ರೋನಿತ್ ಕುಮಾರ್ ಶೆಟ್ಟಿ, ದ್ವಿತೀಯ ಬಿ.ಕಾಂ. (ಸಿ) ಸುಕ್ಷಿತಾ ಹಾಗೂ ದ್ವಿತೀಯ ಬಿ.ಕಾಂ (ಬಿ) ವೈಷ್ಣವಿ ಗಾಂಧೀಜಿ ಮತ್ತು ಶಾಸ್ತ್ರಿಜಿಯವರ ಕುರಿತು ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಾದ ಮಾನ್ಯ ಪ್ರಾರ್ಥಿಸಿ, ಕೀರ್ತನಾ ಸ್ವಾಗತಿಸಿ, ಅನುಷಾ ಕಾರ್ಯಕ್ರಮ ನಿರೂಪಿಸಿದರು.

















































































































