ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ನಲ್ಲಿ ನಡೆದ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಯಶಸ್ಸಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಧನ್ಯೋತ್ಸವ ಕಾರ್ಯಕ್ರಮ ಬಂಟ್ಸ್ ಹಾಸ್ಟೇಲ್ ಬಳಿ ಇರುವ ಶ್ರೀಮತಿ ಗೀತಾ ಎಸ್.ಎಂ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯoತಾಯ ಅಡ್ಯಾರ್ ಗುತ್ತು ಅವರು ಪ್ರಸ್ತಾವನೆಗೈದು ಮಾತನಾಡಿ, 3 ದಿನಗಳ ಕಾಲ ಆಯೋಜಿಸಲಾದ ಗಣೇಶೋತ್ಸವ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆದಿದ್ದು, ಈ ನಿಟ್ಟಿನಲ್ಲಿ ಫಲಾಪೇಕ್ಷೆ ಇಲ್ಲದೇ ದುಡಿದ ಕಾರ್ಯಕರ್ತ ಬಂಧುಗಳು ಅಭಿನಂದನಾರ್ಹರಾಗಿದ್ದಾರೆ ಎಂದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ದಿ ವಿನಾಯಕ ಪ್ರತಿಷ್ಠಾನದ ಮ್ಯಾನೆಜಿಂಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅವರು ಮಾತನಾಡಿ, ಸಮಿತಿಯ ನೂರಾರು ಮಂದಿ ಮನಪೂರ್ವಕವಾಗಿ ದುಡಿದ ಪರಿಣಾಮವಾಗಿ ಗಣೇಶೋತ್ಸವದ ಎಲ್ಲಾ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಲು ಸಾಧ್ಯವಾಯಿತು ಎಂದರು.




ಸಿದ್ಧಿವಿನಾಯಕ ಪ್ರತಿಷ್ಟಾನದ ಟ್ರಸ್ಟಿ ಡಾ. ಆಶಾಜ್ಯೋತಿ ರೈ ಅವರು ಬಂಟ ಕಲಾ ಸಂಗಮದ ಬಗ್ಗೆ ಹಾಗೂ ಸಂಚಾಲಕ ಕಿರಣ್ ಪಕ್ಕಳ ಅವರು ಬಂಟ ಕ್ರೀಡಾಕೂಟದ ಯಶಸ್ಸಿನ ಬಗ್ಗೆ ಮಾತನಾಡಿದರು. ಸಮಿತಿಯ ಸಂಚಾಲಕ ದಿವಾಕರ ಸಾಮಾನಿ ಚೇಳಾರ್ ಗುತ್ತು ಅವರು ವಿವಿಧ ಉಪಸಮಿತಿಗಳ ಕೆಲಸ ಕಾರ್ಯಗಳನ್ನು ಶ್ಲಾಘಿಸಿದರು. ಕೋಶಾಧಿಕಾರಿ ಪ್ರತಿಮಾ ಶೆಟ್ಟಿ ಲೆಕ್ಕಪತ್ರದ ವಿವರ ನೀಡಿದರು. ಬಂಟರ ಮಾತೃ ಸಂಘದ ಕಾರ್ಯದರ್ಶಿ ಕರುಣಾಕರ ಶೆಟ್ಟಿ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮಮೋಹನ ರೈ, ಸಿದ್ಧಿವಿನಾಯಕ ಪ್ರತಿಷ್ಟಾನದ ಟ್ರಸ್ಟಿಗಳಾದ ಶೆಡ್ಡೆ ಮಂಜುನಾಥ ಭಂಡಾರಿ, ಕೃಷ್ಣಪ್ರಸಾದ್ ರೈ, ರವಿರಾಜ ಶೆಟ್ಟಿ ನಿಟ್ಟೆಗುತ್ತು ಮತ್ತಿತರರು ಉಪಸ್ಥಿತರಿದ್ದರು. ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ಸ್ವಾಗತಿಸಿದರು. ಸಮಿತಿಯ ಸಮನ್ವಯಕಾರ ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್ ಕಾರ್ಯಕ್ರಮ ನಿರೂಪಿಸಿದರು.














































































































