ಅಶಕ್ತರಿಗೆ ಸಹಾಯಧನ ಒದಗಿಸುವ ಉದಾತ್ತ ಉದ್ದೇಶದೊಂದಿಗೆ ಮೂಡುಬಿದಿರೆ ಯುವ ಬಂಟರ ಸಂಘದ ವತಿಯಿಂದ ಕನ್ನಡ ಭವನ ಮೂಡುಬಿದಿರೆಯಲ್ಲಿ ಆಯೋಜಿಸಲಾದ ‘ವಿಕ್ರಂ ವೇದ’ ನಾಟಕ ಪ್ರದರ್ಶನವು ಯಶಸ್ವಿಯಾಗಿ ನೆರವೇರಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಪಾಲ್ಗೊಂಡು ಮಾತನಾಡಿ, ಬಡತನದಲ್ಲಿರುವ ಕುಟುಂಬಗಳಿಗೆ ಸಹಾಯ ಮಾಡುವ ಕಾರ್ಯಕ್ರಮ ನಿರಂತರ ನಡೆಯಬೇಕು. ದಾನಿಗಳಿಂದ ಸಹಾಯ ಹಸ್ತವನ್ನು ಪಡೆದು ಸಮಾಜದಲ್ಲಿ ಅಗತ್ಯ ಇರುವವರಿಗೆ ಸಹಾಯ ಮಾಡಬೇಕು ಎಂದು ನುಡಿದರು.




ಈ ಸಂದರ್ಭದಲ್ಲಿ ಮೂಡುಬಿದಿರೆ ಬಂಟರ ಸಂಘದ ಉಪಾಧ್ಯಕ್ಷ ಚೇತನ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಸುಚರಿತ ಶೆಟ್ಟಿ, ಪ್ರೇಮನಾಥ್ ಮಾರ್ಲ, ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷೆ ಡಾ. ಅಮರಶ್ರೀ ಶೆಟ್ಟಿ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಶೋಭಾ ಹೆಗ್ಡೆ, ನಿಡ್ಡೋಡಿ ಚಾವಡಿ ಮನೆ ಜಗನಾಥ್ ಶೆಟ್ಟಿ, ಮೂಡುಬಿದ್ರಿ ವಕೀಲರ ಸಂಘದ ಅಧ್ಯಕ್ಷ ಶರತ್ ಶೆಟ್ಟಿ, ಶಾಂತಿಪ್ರಸಾದ್ ಹೆಗ್ಡೆ, ಸುಧರ್ಶನ್ ಮೂಡುಬಿದ್ರಿ, ರಂಜಿತ್ ಪೂಜಾರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗೋವಾ ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಬೆಳುವಾಯಿ, ಕಾರ್ಕಳ ಬಂಟರ ಸಂಘದ ಅಧ್ಯಕ್ಷ ವಿಜಯ ಶೆಟ್ಟಿ, ಯುವ ಬಂಟರ ಅಧ್ಯಕ್ಷ ಸಂದೀಪ್ ಶೆಟ್ಟಿ ಬೆಳುವಾಯಿ, ಉಪಾಧ್ಯಕ್ಷ ಸಂದೀಪ್ ಶೆಟ್ಟಿ ತೋಡಾರ್, ಕೋಶಾಧಿಕಾರಿ ಭರತ್ ಶೆಟ್ಟಿ ಇರುವೈಲು, ಗೌತಮ್ ಶೆಟ್ಟಿ ಬೆಳುವಾಯಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


















































































































