ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆಯುತ್ತಿರುವ ಕುಂದಾಪುರ ಡಾ. ಬಿ.ಬಿ ಹೆಗ್ದೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಶ್ರಮದಾನವನ್ನು ಪ್ರಗತಿಪರ ಕೃಷಿಕರಾದ ಶ್ರೀ ಕೆ ಶಂಭು ಶಂಕರ್ ರಾವ್ ಹೆಗ್ಗುಂಜೆ ಅವರು ಉದ್ಘಾಟಿಸಿ ಶುಭ ಹಾರೈಸಿದರು. ವಾರ್ಷಿಕ ವಿಶೇಷ ಶಿಬಿರದ ಶಿಬಿರಾಧಿಕಾರಿ ರಾಜೇಶ್ ಶೆಟ್ಟಿ ವಕ್ವಾಡಿ, ಪೂಜಾ ಕುಂದರ್, ಪ್ರಾಧ್ಯಾಪಕ ಹರೀಶ್ ಕಾಂಚನ್ ಹಾಗೂ ಎನ್.ಎಸ್.ಎಸ್ ಸ್ವಯಂ ಸೇವಕರು ಉಪಸ್ಥಿತರಿದ್ದರು. ಎನ್.ಎಸ್.ಎಸ್ ಸ್ವಯಂ ಸೇವಕರಾದ ಸನ್ನಿಧಿ ಬಿ.ಎಸ್ ಸ್ವಾಗತಿಸಿ, ಮಣಿಕಂಠ ಅಥಿತಿಗಳನ್ನು ಪರಿಚಯಿಸಿ, ಕೃತಿ ಕಾರ್ಯಕ್ರಮ ನಿರೂಪಿಸಿದರು.





















































































































