
ಥಾಣೆ ಬಂಟ್ಸ್ ಅಸೋಸಿಯೇಷನ್ ಇದರ 22ನೇ ವಾರ್ಷಿಕ ಮಹಾಸಭೆಯು ಅಕ್ಟೋಬರ್ 18ರ ರವಿವಾರ ಬೆಳಿಗ್ಗೆ ಥಾಣೆ ಪಶ್ಚಿಮ ರೆಹೆಜಾ ಕಾಂಪ್ಲೆಕ್ಸ್ ಎದುರುಗಡೆ ಇರುವ ಹೋಟೆಲ್ ವುಡ್ ಲ್ಯಾಂಡ್ ರಿಟ್ರೀಟ್ ನ ಸಭಾಂಗಣದಲ್ಲಿ ಥಾಣೆ ಬಂಟ್ಸ್ ಎಸೋಸಿಯೇಶನ್ ನ ಅಧ್ಯಕ್ಷ ಅಶೋಕ್ ಎಂ.ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಿತು. ಈ ವಾರ್ಷಿಕ ಮಹಾಸಭೆಯಲ್ಲಿ ವಿವಿಧ ಕಾರ್ಯಕ್ರಮಗಳ ಜೊತೆಗೆ 2026 -28ನೇ ಸಾಲಿನ ನೂತನ ಪದಾಧಿಕಾರಿಗಳ ನೇಮಕ ಪ್ರಕ್ರಿಯೆಯು ಜರಗಿತು. ಇದರಲ್ಲಿ ನೂತನ ಅಧ್ಯಕ್ಷರನ್ನಾಗಿ ಥಾಣೆ ಬಂಟ್ಸ್ ಅಸೋಸಿಯೇಷನ್ ನಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿ ಪ್ರಸ್ತುತ ಅಶೋಕ್ ಎಂ ಶೆಟ್ಟಿಯವರ ಕಾರ್ಯಾವಧಿಯಲ್ಲಿ ಕಳೆದ ಎರಡು ವರ್ಷಗಳಿಂದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಕೈಗಾರಿಕೋದ್ಯಮಿ ಡಾ| ಚಂದ್ರಶೇಖರ್ ಎಸ್ ಶೆಟ್ಟಿಯವರನ್ನು ಮುಂದಿನ ಎರಡು ವರ್ಷದ ಅವಧಿಗೆ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಹಾಗೆಯೇ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮೋಹಿನಿ ಆರ್ ಶೆಟ್ಟಿಯವರ ಕಾರ್ಯಾವಧಿಯಲ್ಲಿ ಎರಡು ವರ್ಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಜ್ಯೋತಿ ನಾರಾಯಣ ಶೆಟ್ಟಿಯವರನ್ನು ಮತ್ತು ಯುವ ವಿಭಾಗದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಿನಿತ್ ಬಿ ಶೆಟ್ಟಿಯವರ ಕಾರ್ಯಾವಧಿಯಲ್ಲಿ ಉಪ ಕಾರ್ಯಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಶ್ವಿನಿ ಪ್ರತೀಕ್ ಶೆಟ್ಟಿಯವರನ್ನು ಅವಿರೋಧವಾಗಿ ನೇಮಕಗೊಳಿಸಲಾಯಿತು.





















































































































