ಸಾಂಪ್ರದಾಯಿಕ ಸೀರೆಗಳು, ಆಭರಣಗಳು ಮಹಿಳೆಯರ ಸೌಂದರ್ಯಕ್ಕೆ ಭೂಷಣದೊಂದಿಗೆ ಭಾವನಾತ್ಮಕ ಸಂಸ್ಕಾರದ ಪ್ರತೀಕ ಎಂದು ಬೋಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಅಡ್ವಕೇಟ್ ಡಿ.ಕೆ ಶೆಟ್ಟಿ ಅವರು ನುಡಿದರು. ಅಕ್ಟೋಬರ್ 24 ಶನಿವಾರ ಬೆಳಗ್ಗೆ 9ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಅಡ್ವೋಕೇಟ್ ಡಿ.ಕೆ ಶೆಟ್ಟಿ ಅವರ ಮಾರ್ಗದರ್ಶನದೊಂದಿಗೆ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತಾ ಎನ್ ಶೆಟ್ಟಿಯವರ ನೇತೃತ್ವದಲ್ಲಿ ಹಾಗೂ ಸಮಿತಿ ಸದಸ್ಯೆಯರ ಮುಂದಾಳತ್ವದೊಂದಿಗೆ ನವಿ ಮುಂಬೈ ಜೂಹಿ ನಗರದ ಬೋಂಬೆ ಬಂಟ್ಸ್ ಅಸೋಸಿಯೇಷನ್ ಬಂಟ್ಸ್ ಸೆಂಟರ್ ನ ಸಭಾಂಗಣದಲ್ಲಿ ವಜ್ರ, ಆಭರಣ, ಸೀರೆಗಳ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮ ನಡೆಯಿತು. ಇದರೊಂದಿಗೆ ಬೆಡ್ ಶೀಟ್, ಡ್ರೆಸ್ ಗಳು ಹಾಗೂ ಬಗೆ ಬಗೆಯ ತಿಂಡಿ ತಿನಿಸುಗಳು ಮಾರಾಟವೂ ನಡೆಯಿತು. ಬೋಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಅಡ್ವಕೇಟ್ ಡಿ.ಕೆ ಶೆಟ್ಟಿ ಮತ್ತು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತಾ ನಾರಾಯಣ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಸಂಘ ಮುಂಬಯಿಯ ಮಹಿಳಾ ವಿಭಾಗದ ಮಾಜಿ ಉಪ ಖಜಾoಜಿ ರತ್ನಾ ಪಿ ಶೆಟ್ಟಿ ಮತ್ತು ಬಂಟರ ಸಂಘ ಅಂದೇರಿ ಬಾಂದ್ರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಎ ಶೆಟ್ಟಿಯವರು ಅತಿಥಿಗಳಾಗಿ ಉಪಸ್ಥಿತರಿದ್ದು, ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.




ಬೋಂಬೆ ಬಂಟ್ಸ್ ಅಸೋಸಿಯೇಷನ್ ನ ಎಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರು, ಸದಸ್ಯೆಯರು, ಮಾಜಿ ಅಧ್ಯಕ್ಷರುಗಳು, ಮಾಜಿ ಕಾರ್ಯಾಧ್ಯಕ್ಷೆಯರು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಇಷ್ಟದ ವಸ್ತುಗಳನ್ನು ಖರೀದಿ ಮಾಡುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಅತಿಥಿಗಳನ್ನು ಅಸೋಸಿಯೇಷನ್ ವತಿಯಿಂದ ಗೌರವಿಸಲಾಯಿತು. ಬೋಂಬೆ ಬಂಟ್ಸ್ ಅಸೋಸಿಯೇಷನ್ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತಾ ನಾರಾಯಣ್ ಶೆಟ್ಟಿ ಆಗಮಿಸಿದ ಎಲ್ಲರನ್ನೂ ಸ್ವಾಗತಿಸುತ್ತಾ ವಸ್ತುಗಳನ್ನು ಖರೀದಿ ಮಾಡಿದವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.


















































































































