ಸಮಾಜಸೇವೆ ಹಾಗೂ ಉದ್ಯಮ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ, ಕರ್ನಾಟಕ ಸಂಘ ಶಾರ್ಜಾ ನೀಡುವ 2026ರ ‘ಮಯೂರ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ’ಗೆ ಸಮಾಜಸೇವಕ ಹಾಗೂ ಉದ್ಯಮಿ ಸುಂದರ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ಸಂಘ ಶಾರ್ಜಾದ 24ನೇ ವಾರ್ಷಿಕೋತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 15ರಂದು ಅಜ್ಮಾನ್ನ ನಾರ್ತ್ ಗೇಟ್ ಬ್ರಿಟಿಷ್ ಸ್ಕೂಲ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮವು ಮಧ್ಯಾಹ್ನ 3:30 ರಿಂದ ಆರಂಭವಾಗಲಿದೆ.




ಸಮಾಜಸೇವೆ ಮತ್ತು ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸುಂದರ್ ಶೆಟ್ಟಿ ಅವರ ಸೇವೆ ಹಾಗೂ ಸಾಧನೆಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭದೊಂದಿಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಯುಎಇಯ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ಸಂಘ ಶಾರ್ಜಾದ ಅಧ್ಯಕ್ಷ ವಿಶ್ವನಾಥ್ ಶೆಟ್ಟಿ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಮನವಿ ಮಾಡಿದ್ದಾರೆ.


















































































































