
ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷರಾದ ಎ.ಸಿ ಭಂಡಾರಿ ಅವರನ್ನು ಅರೋಗ್ಯ ಸಚಿವರಾದ ಯು ಟಿ ಖಾದರ್ ಅವರು ಸನ್ಮಾನಿಸಿ ಅಭಿನಂದಿಸಿ ಮಾತನಾಡಿ, ತುಳು ಭಾಷೆ, ಸಂಸ್ಕೃತಿ ಹಾಗೂ ಸಮಾಜದ ಏಳಿಗೆಗಾಗಿ ಹಲವಾರು ವರ್ಷಗಳಿಂದ ಶ್ರಮಿಸುತ್ತಿರುವ ಅವರಿಗೆ ಸಂದಿರುವ ಈ ಗೌರವ ನಮ್ಮ ದಕ್ಷಿಣ ಕನ್ನಡ ಜಿಲ್ಲೆಗೂ ಹೆಮ್ಮೆಯ ವಿಷಯ. ಅವರ ಸಮಾಜಮುಖಿ ಸೇವೆ ಇನ್ನಷ್ಟು ಜನರಿಗೆ ತಲುಪಲಿ ಎಂದು ಶುಭ ಹಾರೈಸಿದರು





















































































































