ಕನ್ನಡ ವೆಲ್ಫೇರ್ ಸೊಸೈಟಿ (ರಿ) ಘಾಟ್ಕೋಪರ್ ಇದರ 48ನೇ ವಾರ್ಷಿಕ ಮಹಾಸಭೆಯು ನವೆಂಬರ್ 15ರ ರವಿವಾರ ಬೆಳಗ್ಗೆ 10:30ಕ್ಕೆ ಘಾಟ್ಕೋಪರ್ ಕನ್ನಡ ವೆಲ್ಫೇರ್ ಸೊಸೈಟಿಯ ಮಹೇಶ್ ಎಸ್ ಶೆಟ್ಟಿ (ಬಾಬಾ ಗ್ರೂಪ್ಸ್) ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ನವೀನ್ ಶೆಟ್ಟಿ ಇನ್ನ ಬಾಳಿಕೆಯವರ ಅಧ್ಯಕ್ಷತೆಯಲ್ಲಿ ಜರಗಲಿದೆ. ಈ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯ ಬಾಂಧವರೆಲ್ಲರೂ ಸಮಯಕ್ಕೆ ಸರಿಯಾಗಿ ಬಂದು, ತಮ್ಮ ಯೋಗ್ಯ ಸಲಹೆ, ಸೂಚನೆ, ಮಾರ್ಗದರ್ಶನ ನೀಡಿ ಸಂಘದ ಮುಂದಿನ ಯೋಜನೆಗಳಿಗೆ ಮತ್ತು ಬೆಳವಣಿಗೆಗೆ ಸಹಕರಿಸಬೇಕಾಗಿ ಕಾರ್ಯಕಾರಿ ಸಮಿತಿಯ ಅನುಮತಿಯ ಮೇರೆಗೆ ಗೌರವ ಪ್ರಧಾನ ಕಾರ್ಯದರ್ಶಿಯವರು ವಿನಂತಿಸಿಕೊಂಡಿದ್ದಾರೆ.





















































































































