ಬಂಟರ ಸಂಘ ಪುಣೆ ಇದರ ಆಶ್ರಯದಲ್ಲಿ ಸಮಾಜ ಬಾoಧವರಿಗಾಗಿ ನಡೆಯುವ ವಾರ್ಷಿಕ ಕ್ರೀಡಾಕೂಟವು ನವೆಂಬರ್ 29ರಂದು ಬೆಳಿಗ್ಗೆ 9 ರಿಂದ ಪುಣೆಯ ಮುಕುಂದ್ ನಗರದ ಮಹಾರಾಷ್ಟ್ರೀಯ ಮಂಡಲ ಕಟಾರಿಯಾ ಕಾಲೇಜು ಮೈದಾನದಲ್ಲಿ ವಿವಿಧ ಅಟೋಟ ಸ್ಪರ್ಧೆಗಳೊoದಿಗೆ ಅದ್ದೂರಿಯಾಗಿ ಜರಗಲಿದೆ. ಪುಣೆ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆಯವರ ಗೌರವ ಉಪಸ್ಥಿತಿಯಲ್ಲಿ ಅಧ್ಯಕ್ಷ ಅಜಿತ್ ಹೆಗ್ಡೆ ಕೆಂಜಾರುಗುತ್ತು ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮಹಾರಾಷ್ಟ್ರೀಯ ಮಂಡಲ ಪುಣೆ ಇದರ ಪ್ರಧಾನ ಕಾರ್ಯದರ್ಶಿ ರೋಹನ್ ಧನಂಜಯ್ ದಾಮ್ಲೆ ಹಾಗೂ ಗೌರವ ಅತಿಥಿಯಾಗಿ ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಅಧ್ಯಕ್ಷ ಜಗದೀಶ್ ಶೆಟ್ಟಿ ಅವರು ಆಗಮಿಸಲಿದ್ದಾರೆ. ಸಂಜೆ 5ರಿಂದ ಕ್ರೀಡಾಕೂಟದ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ರಾಷ್ಟ್ರಮಟ್ಟದ ಫುಟ್ಬಾಲ್ ತರಬೇತುದಾರ ಸಚಿನ್ ಬಡಾದೆ, ಗೌರವ ಅತಿಥಿಗಳಾಗಿ ಬಂಟ್ಸ್ ಅಸೋಸಿಯೇಶನ್ ಪುಣೆ ಅಧ್ಯಕ್ಷ ಸತೀಶ್ ರೈ ಕಲ್ಲಂಗಳಗುತ್ತು ಮತ್ತು ಪುಣೆ ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಅವರು ಪಾಲ್ಗೊಳ್ಳಲಿದ್ದಾರೆ.
ಪುಣೆ ಬಂಟರ ಸಂಘದ ಕ್ರೀಡಾ ಕಾರ್ಯಾಧ್ಯಕ್ಷ ವಿವೇಕಾನಂದ ಶೆಟ್ಟಿ ಆವರ್ಸೆ ಇಸಾರಮಕ್ಕಿ ಅವರ ನೇತೃತ್ವದಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ಬಂಟರ ಸಂಘದ ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ, ಯುವ ವಿಭಾಗ, ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಪ್ರಾದೇಶಿಕ ಸಮಿತಿಗಳ ಸಹಕಾರದೊಂದಿಗೆ ಸಮಾಜ ಬಾಂಧವರ ವಯೋಮಿತಿಗೆ ಅನುಗುಣವಾಗಿ ವೈವಿಧ್ಯಮಯ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿಶೇಷವಾಗಿ ಮಕ್ಕಳಿಗಾಗಿ ರನ್ನಿಂಗ್ ರೇಸ್, ಪುರುಷ ಮತ್ತು ಮಹಿಳೆಯರಿಗಾಗಿ ವಿವಿಧ ಓಟದ ಸ್ಪರ್ಧೆಗಳು, ಶಾಟ್ ಪುಟ್ ಮತ್ತು ಇನ್ನಿತರ ಸ್ಪರ್ಧೆಗಳು, ವಿಶೇಷ ಆಕರ್ಷಣೆಯಾಗಿ ವಾಲಿಬಾಲ್, ತ್ರೋಬಾಲ್, ಹಗ್ಗಜಗ್ಗಾಟ ನಡೆಯಲಿದೆ. ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ವಿಜೇತರಾದವರಿಗೆ ಪ್ರಶಸ್ತಿ ವಿತರಣೆ ನಡೆಯಲಿದೆ. ಬೆಳಿಗ್ಗೆ ಕ್ರೀಡಾಕೂಟದ ಉದ್ಘಾಟನೆ ಸಂದರ್ಭದಲ್ಲಿ ಪಥ ಸಂಚಲನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪುಣೆ ಬಂಟರ ಸಂಘ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ (9822356253) ಮತ್ತು ಕ್ರೀಡಾ ಕಾರ್ಯಾಧ್ಯಕ್ಷ ವಿವೇಕಾನಂದ ಶೆಟ್ಟಿ ಆವರ್ಸೆ ಇಸಾರಮಕ್ಕಿ (9822011736) ಅವರನ್ನು ಸಂಪರ್ಕಿಸಬಹುದು.





ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸಮಯಕ್ಕೆ ಸರಿಯಾಗಿ ಆಗಮಿಸಿ ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸುವಂತೆ ಪುಣೆ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಅಧ್ಯಕ್ಷ ಅಜಿತ್ ಹೆಗ್ಡೆ ಕೆಂಜಾರುಗುತ್ತು, ಉಪಾಧ್ಯಕ್ಷರುಗಳಾದ ವಿಶ್ವನಾಥ್ ಶೆಟ್ಟಿ, ರಾಮಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣಂಜಾರು, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ ಹೆರ್ಡೆಬೀಡು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಮ್ಮಿ ಎ ಹೆಗ್ಡೆ, ಕ್ರೀಡಾ ಕಾರ್ಯಾಧ್ಯಕ್ಷ ವಿವೇಕಾನಂದ ಶೆಟ್ಟಿ ಆವರ್ಸೆ ಇಸಾರಮಕ್ಕಿ, ಮಹಿಳಾ ವಿಭಾಗದ ಕ್ರೀಡಾ ಕಾರ್ಯಾಧ್ಯಕ್ಷೆ ವಿನಯಾ ಯು ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿನಂದನ್ ಶೆಟ್ಟಿ, ದಕ್ಷಿಣ, ಉತ್ತರ, ಪೂರ್ವ, ಪಶ್ಚಿಮ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷರುಗಳಾದ ಸುಧಾಕರ್ ಶೆಟ್ಟಿ, ನಾರಾಯಣ ಹೆಗ್ಡೆ, ಸಂದೇಶ್ ಶೆಟ್ಟಿ, ವಿದ್ಯಾನಂದ ಶೆಟ್ಟಿ, ವಿನೋದ ಶೆಟ್ಟಿ, ಪ್ರೇಮಾ ಶೆಟ್ಟಿ, ಶಾಲಿನಿ ಶೆಟ್ಟಿ, ನಯನಾ ಶೆಟ್ಟಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


















































































































