ತುಳು ಭಾಷೆ, ಕಲೆ ಮತ್ತು ಸಂಸ್ಕೃತಿಯ ಉಳಿವು ಹಾಗೂ ಬೆಳವಣಿಗೆಯ ಉದ್ದೇಶದಿಂದ ಉಡುಪಿ ತುಳುಕೂಟ ವತಿಯಿಂದ 31ನೇ ವರ್ಷದ ತುಳು ಭಾವಗೀತೆ ಸ್ಪರ್ಧೆಯನ್ನು ನವೆಂಬರ್ 29ರಂದು ಬೆಳಿಗ್ಗೆ 9.30ರಿಂದ ಉಡುಪಿ ಕ್ರಿಶ್ಚಿಯನ್ ಹೈಸ್ಕೂಲ್ನಲ್ಲಿ ಆಯೋಜಿಸಲಾಗಿದೆ. ದಿ. ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ ನಡೆಯುವ ಸ್ಪರ್ಧೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ತುಳು ಸಾಹಿತಿ, ಐಲೇಸಾ ದಿ ವಾಯ್ಸ್ ಆಫ್ ಓಷನ್ (ರಿ) ನ ಸ್ಥಾಪಕ ಸದಸ್ಯರಾದ ಶಾಂತಾರಾಮ ವಿ ಶೆಟ್ಟಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ತುಳುಕೂಟ ಉಡುಪಿಯ ಅಧ್ಯಕ್ಷ ಬಿ ಜಯಕರ ಶೆಟ್ಟಿ ಇಂದ್ರಾಳಿ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.






















































































































