ಸಹಕಾರ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ರಾಜ್ಯ ಸಹಕಾರ ಮಂಡಳ ನೀಡುವ ಸಹಕಾರ ರತ್ನ ಪ್ರಶಸ್ತಿಗೆ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದ ಅಧ್ಯಕ್ಷ ರವಿರಾಜ ಹೆಗ್ಡೆಯವರು ಆಯ್ಕೆಯಾಗಿದ್ದಾರೆ.
ಸೀತಾರಾಮ ರೈ ಅವರು ಸ್ಥಾಪಿಸಿದ ಆದರ್ಶ ವಿವಿದೋದ್ಧೇಶ ಸಹಕಾರಿ ಸಂಘವನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಶಾಖೆಗಳನ್ನು ಹೊಂದಿ ಮುನ್ನಡೆಯುತ್ತಿದೆ. ಇವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ ಪಾತ್ರರಾಗಿದ್ದಾರೆ.