ಬಂಟರ ಸಂಘ ಮುಂಬಯಿ ಇದರ ಮಾತೃಭೂಮಿ ಕೋ ಆಪ್ ಕ್ರೆಡಿಟ್ ಸೊಸೈಟಿಯ ನೂತನ ಕಾರ್ಯಧ್ಯಕ್ಷರಾಗಿ ಹೋಟೆಲ್ ಉದ್ಯಮಿ, ಸಮಾಜ ಸೇವಕ ಮೋಹನದಾಸ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಡಾ ಆರ್ ಕೆ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರವೀಣ್ ಭೋಜ ಶೆಟ್ಟಿ, ಕೋಶಧಿಕಾರಿಯಾಗಿ ಸಿ ಎ ಹರೀಶ್ ಶೆಟ್ಟಿ ಯವರು ಆಯ್ಕೆಯಾದರು. ಸೊಸೈಟಿಯ ಆಡಳಿತ ಮಂಡಳಿಗೆ ಸಿ ಎ ರಮೇಶ್ ಶೆಟ್ಟಿ, ಮಹೇಶ್ ಶೆಟ್ಟಿ, ಶಶಿಧರ್ ಶೆಟ್ಟಿ, ಸುನಂದಾ ಶೆಟ್ಟಿ, ರಾಜಶ್ರೀ ಶೆಟ್ಟಿ ನಿರ್ದೇಶಕರುಗಳಾಗಿ ಆಯ್ಕೆಯಾದರು.
ಮೋಹನದಾಸ್ ಶೆಟ್ಟಿಯವರು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಚಿಂತಕರಾಗಿದ್ದುಕೊಂಡು ಮುಂಬಯಿ ಬಂಟರ ಸಂಘದಲ್ಲಿ ಕಳೆದ 18 ವರ್ಷಗಳಿಂದ ಸಕ್ರಿಯರಾಗಿದ್ದುಕೊಂಡು ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಪ್ರಸ್ತುತ ಮುಂಬಯಿ ಬಂಟರ ಸಂಘದ ಉಪಾಧ್ಯಕ್ಷರಾಗಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದಲ್ಲಿ ಕೋಶಾಧಿಕಾರಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.